ಬೆಂಗಳೂರು :ಅ. 1ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಅ. 1ಕ್ಕೆ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ - ವಾಣಿ ವಿಲಾಸ ಜಲಾಶಯ
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ಇಂದು ಭದ್ರಾ ಮೇಲ್ದಂಡೆ ಯೋಜನೆ ಕುರಿತಂತೆ ಚಿತ್ರದುರ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಜೊತೆ ಚರ್ಚೆ ನಡೆಸಿದ್ದು, ಅ. 1ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು, ಇಂದು ಭದ್ರಾ ಮೇಲ್ದಂಡೆ ಯೋಜನೆ ಕುರಿತಂತೆ ಚಿತ್ರದುರ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ರೈತರು, ಸರಿಯಾದ ಸಮಯಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿ ವಿಲಾಸ ಜಲಾಶಯಕ್ಕೆ ಆದಷ್ಟು ಬೇಗ ನೀರು ಬಿಡಬೇಕು. ಮಧ್ಯ ಕರ್ನಾಟಕದ ನೀರಾವರಿ ಯೋಜನೆ ಕಾಮಾಗಾರಿಯ ವೇಗವನ್ನ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕೂಡಲೇ ನೀರಾವರಿ ಯೋಜನೆಗಳ ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು. ಅ. 1ಕ್ಕೆ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡಬೇಕು. ಹಗಲು ರಾತ್ರಿ ಕೆಲಸ ಮಾಡಿ ಇತರೆ ನೀರಾವರಿ ಯೋಜನೆಗಳನ್ನು ಮುಕ್ತಾಯ ಮಾಡಬೇಕು. ಯಾವುದೇ ಕುಂಟು ನೆಪ ಹೇಳುವಂತಿಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.