ಕರ್ನಾಟಕ

karnataka

ETV Bharat / state

ಶಿವಮೊಗ್ಗ ಕ್ವಾರಿ ಸ್ಫೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ - ಶಿವಮೊಗ್ಗ ಕ್ವಾರಿ ಸ್ಟೋಟ ಪ್ರಕರಣ .

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

cm-orders-high-level-probe-into-shivamogga-quarry-stota-case
ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

By

Published : Jan 22, 2021, 8:41 AM IST

ಬೆಂಗಳೂರು: ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರಿ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಶಿವಮೊಗ್ಗದ ಹುಣಸೋಡು ಬಳಿ ಕ್ವಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರಿ ಅನಾಹುತದಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದಿ ಸಿಎಂ ಟ್ವೀಟ್ ಮಾಡಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details