ಕರ್ನಾಟಕ

karnataka

ETV Bharat / state

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಭೇದಿಸಿದ ಪೊಲೀಸರು, ಗೃಹ ಸಚಿವರಿಗೆ ಸಿಎಂ ಅಭಿನಂದನೆ - ಗೃಹ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ

ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.

cm-praises-police-for-arresting-gangrape-accused
ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಭೇದಿಸಿದ ಪೊಲೀಸರು, ಗೃಹ ಸಚಿವರಿಗೆ ಸಿಎಂ ಅಭಿನಂದನೆ

By

Published : Aug 28, 2021, 10:44 PM IST

ಬೆಂಗಳೂರು:ಮೈಸೂರು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ‌ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಈ ಪ್ರಕರಣ ಸವಾಲಿನದ್ದಾಗಿತ್ತು. ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮೈಸೂರಿನ ಪೊಲೀಸರು ಅಲ್ಪ ಸಮಯದಲ್ಲಿ ಐದು ಜನ ಆರೋಪಿಗಳನ್ನು ಸೆರೆಹಿಡಿದು ವಿಚಾರಣೆಗೊಳಪಡಿಸಿದ್ದಾರೆ. ಆ ಮೂಲಕ ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದಕ್ಕಾಗಿ ನಾನು ಗೃಹ ಸಚಿವ ಆರಗ ಜ್ಞಾನೇಂದ್ರ, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಮೈಸೂರು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ವಿಚಾರಣೆಯನ್ನು ಅತಿ ಶೀಘ್ರದಲ್ಲಿ ಮುಗಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಆಗಸ್ಟ್​ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಭೇದಿಸಿರುವ ಪೊಲೀಸರು 6 ಜನ ಆರೋಪಿಗಳಲ್ಲಿ ಈಗಾಗಲೇ 5 ಜನರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡ ಇನ್ನೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ಜಮೀನು ವಿವಾದಕ್ಕೆ ಒಂದೇ ಕುಟುಂಬದ ನಾಲ್ವರ ಕೊಲೆ: ಬೆಚ್ಚಿಬಿದ್ದ ಜಮಖಂಡಿ ಜನ

ABOUT THE AUTHOR

...view details