ಕರ್ನಾಟಕ

karnataka

ETV Bharat / state

ರೈತರ ಸಾಲಮನ್ನಾ ಯೋಜನೆ ಅನುಷ್ಠಾನ ಕ್ರಮಕ್ಕೆ ಸಿಎಂ ಸೂಚನೆ - undefined

ಇಂದು ಸಿಎಂ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ಈ ವೇಳೆ ರೈತರ ಸಾಲಮನ್ನಾ ಯೋಜನೆ ಅನುಷ್ಠಾನ ಕುರಿತಂತೆ ಸಾಲಮನ್ನಾ ಯೋಜನೆ ಅನುಸಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಸಿಎಂ ಕುಮಾರಸ್ವಾಮಿ

By

Published : May 8, 2019, 11:24 PM IST

ಬೆಂಗಳೂರು :ರೈತರ ಸಾಲಮನ್ನಾ ಯೋಜನೆ ಅನುಷ್ಠಾನ ಕುರಿತಂತೆ ಸಾಲಮನ್ನಾ ಯೋಜನೆ ಅನುಸಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶಂಪುರ, ಪಶುಸಂಗೋಪನಾ ಸಚಿವ ನಾಡಗೌಡ ಹಾಗೂ ಸಹಕಾರ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಾಲಮನ್ನಾ ಯೋಜನೆಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. 2018ರ ಡಿಸೆಂಬರ್ ತಿಂಗಳಿನಿಂದ ರೈತರ ಸಾಲವನ್ನು ಹಂತ ಹಂತವಾಗಿ ಅವರ ಖಾತೆಗೆ ಭರ್ತಿ ಮಾಡಲಾಗುತ್ತಿದೆ. ಈವರೆಗೆ ಸಹಕಾರ ಸಂಘಗಳ 8.3 ಲಕ್ಷ ರೈತರಿಗೆ 3500 ಕೋಟಿ ರೂ. ಸಾಲಮನ್ನಾ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಸಹಕಾರ ಸಂಘಗಳಲ್ಲಿ ರೈತರು ನಿಯಮಾವಳಿಗಳಂತೆ ಅರ್ಹತೆ ಪಡೆದ ದಿನದಂದು ಅವರ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ವಾಣಿಜ್ಯ ಬ್ಯಾಂಕ್​ಗಳಲ್ಲಿ 7.5 ಲಕ್ಷ ರೈತರಿಗೆ 3930 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ 1.5 ಲಕ್ಷ ರೈತರ ಸುಮಾರು 900 ಕೋಟಿ ರೂ ಸಾಲಮನ್ನಾ ಮೊತ್ತ ಬಿಡುಗಡೆಗೆ ಸಿದ್ದವಾಗಿದ್ದು, ಮೇ 23ರ ನಂತರ ಬಿಡುಗಡೆ ಮಾಡಲಾಗುವುದು ಎಂದು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ತಿಳಿಸಿದ್ದಾರೆ.

ಒಟ್ಟಾರೆಯಾಗಿ ವಾಣಿಜ್ಯ ಬ್ಯಾಂಕ್​ ಹಾಗೂ ಸಹಕಾರಿ ಬ್ಯಾಂಕ್​ಗಳ 15.5 ಲಕ್ಷ ರೈತರ 7417 ಕೋಟಿ ರೂ. ಮನ್ನಾ ಮಾಡಲಾಗಿದೆ.ರೈತರ ಸಾಲಮನ್ನಾ ಯೋಜನೆಯನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ನಿಯಮಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ರೈತರ ಸಾಲಮನ್ನಾ ಈ ಆರ್ಥಿಕ ವರ್ಷದಲ್ಲೆ ಆಗಲಿದೆ. ರೈತರ ಸಾಲಮನ್ನಾ ಯೋಜನೆಗೆ ಹಣಕಾಸು ಕೊರತೆ ಇರುವುದಿಲ್ಲ ಹಾಗೂ ಈಗಾಗಲೇ ಪ್ರಕಟಿಸಿರುವ ಯೋಜನಗಳಿಗೆ ಸಾಲಮನ್ನಾದಿಂದ ಯಾವುದೇ ಅಡ್ಡಿಯೂ ಆಗುವುದಿಲ್ಲ.ಸಾಲಮನ್ನಾ ಯೋಜನೆಯ ಅನುಷ್ಠಾನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಕ್ರಿಯೆಯನ್ನು ವಾರಕ್ಕೊಮ್ಮೆ ಪರಿಶೀಲಿಸುವಂತೆ ಸಹಕಾರ ಸಚಿವರಿಗೆ ಹಾಗೂ ಸಹಕಾರ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಆರ್ಥಿಕ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್ ಅವರು ತಿಳಿಸಿದರು.

For All Latest Updates

TAGGED:

ABOUT THE AUTHOR

...view details