ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರು ಆದಷ್ಟು ಬೇಗ ಗುಣಮುಖರಾಗಲೆಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಸಿಎಂ ಬಿಎಸ್ವೈ ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ: ಸಚಿವ ಸುಧಾಕರ್ - CM should cure from corona as soon as possible
ಸಿಎಂ ಯಡಿಯೂರಪ್ಪ ಅವರು ಆದಷ್ಟು ಬೇಗ ಕೊರೊನಾ ಸೋಂಕಿನಿಂದ ಗುಣಮುಖರಾಗಲೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಪ್ರಾರ್ಥಿಸಿದ್ದಾರೆ.
ಸಚಿವ ಸುಧಾಕರ್
ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.