ಕರ್ನಾಟಕ

karnataka

ETV Bharat / state

Karnataka Budget: ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ 34 ಸಾವಿರ ಕೋಟಿ ರೂ. ಸಿಎಂ ಸಿದ್ದರಾಮಯ್ಯ ಘೋಷಣೆ - 34 ಸಾವಿರ ಕೋಟಿ ರೂ

ಸಿಎಂ ಸಿದ್ದರಾಮಯ್ಯ ಶುಕ್ರವಾರ 14ನೇ ಭಾರಿ ಬಜೆಟ್​ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ 34 ಸಾವಿರ ಕೋಟಿ ರೂ. ಅನುದಾನವನ್ನು ಸಿದ್ದರಾಮಯ್ಯ ಘೋಷಿಸಿದ್ದಾರೆ.

Karnataka Budget 2023
ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ 34 ಸಾವಿರ ಕೋಟಿ ರೂ. ಸಿಎಂ ಸಿದ್ದರಾಮಯ್ಯ ಘೋಷಣೆ

By

Published : Jul 7, 2023, 5:09 PM IST

Updated : Jul 7, 2023, 5:58 PM IST

ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ ಅಡಿಯಲ್ಲಿ ಈ ವರ್ಗಗಳ ಅಭಿವೃದ್ದಿಗಾಗಿ 34,294 ರೂ.ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಕಳೆದ ಅವಧಿಗಿಂತ ಪ್ರಸ್ತುತ ಬಜೆಟ್​ನಲ್ಲಿ 4,079 ಕೋಟಿ ರೂ.ಗಳನ್ನು ಒದಗಿಸಿರುವುದಾಗಿ ಅವರು ತಿಳಿಸಿದ್ದಾರೆ.

ಗುಣಮಟ್ಟದ ಕ್ರೀಡಾ ಸೌಲಭ್ಯಕ್ಕೆ 20 ಕೋಟಿ ರೂ. ಅನುದಾನ:ಅಲ್ಲದೇ, ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಗಳಿಗೆ ಸೇರಿದ ಹತ್ತು ಕ್ರೈಸ್​ ವಸತಿ ಶಾಲೆಗಳಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸುವುದು. ಉತ್ತಮ ಗುಣಮಟ್ಟದ ಕ್ರೀಡಾ ಸೌಲಭ್ಯ ಒದಗಿಸಲು ಪ್ರತಿ ಶಾಲೆಗೆ ತಲಾ ಎರಡು ಕೋಟಿ ರೂ.ಗಳಂತೆ 20 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಪ್ರಕಟಿಸಿದ್ದಾರೆ.

ಇದನ್ನೂ ಓದಿ:Karnataka Budget: ಮೈಸೂರಿನಲ್ಲಿ ಫಿಲ್ಮ್​ ಸಿಟಿ; ಕಲಬುರಗಿಯಲ್ಲಿ ಜಾನಪದ ಲೋಕ ಸ್ಥಾಪನೆ

ವಿದೇಶಗಳಲ್ಲಿ 36 ಕೋಟಿ ರೂ. ಅನುದಾನ:ಉತ್ತನ ಶಿಕ್ಷಣಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಗಳ ವಿದ್ಯಾರ್ಥಿಗಳಿಗೆ ವಿಶ್ವದ ವಿವಿಧ ದೇಶಗಳಲ್ಲಿನ 250 ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ, ಉನ್ನತ ಶಿಕ್ಷಣ ಕೈಗೊಳ್ಳುವುದಕ್ಕಾಗಿ 36 ಕೋಟಿ ರೂ. ಒದಗಿಸಲಾಗಿದೆ. ಐಸೆಕ್ ಸಂಸ್ಥೆಯಲ್ಲಿ ಪಿಎಚ್​ಡಿ ಮಾಡುವ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಗಳಿಗೆ ಡಾ. ಬಿ.ಆರ್​. ಅಂಬೇಡ್ಕರ್​ ಫೆಲೋಶಿಫ್​ ನೀಡಲು 2 ಕೋಟಿ ರೂ. ನೀಡಲು ಬಜೆಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:Karnataka Budget: ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ; ಇವುಗಳಿಗೆ ಆದಾಯ ಸಂಗ್ರಹ ಹೇಗೆ?

ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ ರೂ.: ಜೇನು ಕುರುಬ, ಕಾಡು ಕುರಬ, ಕೊರಗ, ಸೇರಿದಂತೆ ಬೆಟ್ಟಕುರುಬ ಸೇರಿ ಇತರ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂ. ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಿಗೆ ಪೌಷ್ಟಿಕ ಆಹಾರ ವಿತರಣೆ ಯೋಜನೆಯನ್ನು 6 ರಿಂದ 12 ತಿಂಗಳಿಗೆ ವಿಸ್ತರಿಸಲು 50 ಕೋಟಿ ರು. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಬಜೆಟ್​ ಮಂಡನೆಗೆ ಮೊದಲು ದೇವಸ್ಥಾನದಲ್ಲಿ ಪೂಜೆ ಸಲ್ಲಿಸದೇ ಸಂಪ್ರದಾಯ ಮುರಿದ ಸಿಎಂ ಸಿದ್ದರಾಮಯ್ಯ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ:ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಗಳಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ನೆರವಿಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಎನ್​ಜಿಒಗಳ ಸಹಭಾಗಿತ್ವದಲ್ಲಿ ವೃದ್ಧಾಶ್ರಮಗಳ ಪ್ರಾರಂಭ. ಜೊತೆಗೆ, ಒಂದು ಲಕ್ಷ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಗಳ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ. ಅರಣ್ಯ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗಾಗಿ ಬುಡುಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳ ಸ್ಥಾಪನೆ ಎಂದು ಸಿಎಂ ಹೇಳಿದರು..

ಹಿಂದುಳಿದ ವರ್ಗಗಳಿಗೆ 1 ಲಕ್ಷದ ವರೆಗಿನ ಕಾಮಗಾರಿಗಳಿಗೆ ಮೀಸಲಾತಿ:ರಾಜ್ಯ ಸರ್ಕಾರ ನಡೆಸುವ ಕಾಮಗಾರಿಗಳಿಗೆ ಹಿಂದುಳಿದ ವರ್ಗಗಳಿಗೆ 1 ಲಕ್ಷದ ವರೆಗಿನ ಕಾಮಗಾರಿಗಳಿಗೆ ಮೀಸಲಾತಿ ಒದಗಿಸಲು ಅಗತ್ಯ ಕ್ರಮ ಕೈಗಿಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅಲ್ಲದೆ, ರಾಜ್ಯದ ಸೇವಾ ವಲಯದಲ್ಲಿರುವ ಅವಕಾಶಗಳನ್ನು ಈ ವರ್ಗದ ಉದ್ಯಮಿಗಳು ಸದ್ಬಳಕೆ ಮಾಡಿಕೊಳ್ಳಲು ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಪಡೆಯುವ 10 ಕೋಟಿ ರೂ. ಸಾಲಕ್ಕೆ ಶೇ.6 ಬಡ್ಡಿ ಸಹಾಯಧನ ನೀಡಲಾಗುವುದು. ಹಿಂದುಳಿದ, ಅತಿ ಹಿಂದುಳಿದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಲು 2 ಕೋಟಿ ರೂ. ಅನುಧಾನ ನೀಡುವುದಾಗಿ ತಿಳಿಸಿದ್ದಾರೆ.

ಶೇ.2ರಷ್ಟು ವಾರ್ಷಿಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ:ಹಿಂದುಳಿ ವರ್ಗಗಳ ವಿದ್ಯಾರ್ಥಿಗಳ ಎಂಜಿನಿಯರಿಂಗ್​ ಮತ್ತು ವೃತ್ತಿಪರ ಕೋರ್ಸ್​ಗಳಿಗೆ ವ್ಯಾಸಾಂಗ ಮಾಡುವವರಿಗೆ ಶೇ.2 ರಷ್ಟು ವಾರ್ಷಿಕ ಬಡ್ಡಿದರದಲ್ಲಿ ಸಾಲ ನೀಡುತ್ತಿದ್ದ ಅರಿವು ಯೋಜನೆಯ ಪುನರಾರಂಭ ಮಾಡುವುದು. ವಿದೇಶಿ ವಿಶ್ವವಿದ್ಯಾಲಯ ವ್ಯಾಸಾಂಗ ಮಾಡುವು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ.ನಂತೆ ಸಾಲ ಸೌಲಭ್ಯ ಒದಗಿಸಲು 10 ಕೋಟಿ ರೂ. ನೀಡುವುದಾಗಿ ಹೇಳಿದ್ದಾರೆ.

ವಿದ್ಯಾ ಸಿರಿ ಯೋಜನೆಯಡಿ ಸರ್ಕಾರದ ವಸತಿ ನಿಲಯಗಳಲ್ಲಿ ಪ್ರವೇಶ ದೊರಕದ ಹಿಂದುಳಿದ ವರ್ಗಗಳ ಊಟ ಮತ್ತು ವಸತಿಗಾಗಿ ನೀಡುತ್ತಿದ್ದ 15,000 ರೂ.ಗಳ ನೀಡುವ ಕಾರ್ಯಕ್ರಮವನ್ನು ಮುಂದುವರೆಸಲು ತಿಳಿಸಲಾಗಿದೆ. ಅಲ್ಲದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿ ವಿದ್ಯಾರ್ಥಿನಿಲಯಗಳಿಗೆ ಅಗತ್ಯವಿರುವ ಮೂಲಸೌಕರ್ಯ, ಈ ವಿದ್ಯಾರ್ಥಿ ನಿಯಲಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್​ ವಿತರಣೆ ಕಾರ್ಯಕ್ರಮ ಮುಂದುವರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ.

ಇದನ್ನೂ ಓದಿ:Karnataka Budget: ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 30,000 ಕೋಟಿ ರೂಪಾಯಿ ವೆಚ್ಚ

Last Updated : Jul 7, 2023, 5:58 PM IST

ABOUT THE AUTHOR

...view details