ಕರ್ನಾಟಕ

karnataka

ETV Bharat / state

ಶಿವಮೊಗ್ಗ ಗಲಭೆ: ಗೃಹ ಇಲಾಖೆ, ಡಿಜಿಐಜಿಪಿ ಅವರಿಂದ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ - etv bharat kannada

ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗ ಗಲಭೆಗೆ ಸಂಬಂಧಿಸಿದಂತೆ ಗೃಹ ಇಲಾಖೆ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ ವರದಿ ಕೇಳಿದ್ದಾರೆ.

Etv Bharatcm-siddaramaiah-asked-report-from-dgigp-and-police-department-over-shimogga-riot
ಶಿವಮೊಗ್ಗ ಗಲಭೆ: ಗೃಹ ಇಲಾಖೆ, ಡಿಜಿಐಜಿಪಿ ಬಳಿ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Oct 2, 2023, 10:47 PM IST

ಬೆಂಗಳೂರು: ಶಿವಮೊಗ್ಗ ಗಲಭೆ ಮತ್ತು ಬೆಳವಣಿಗೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಇಲಾಖೆ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ ವರದಿ ಕೇಳಿದ್ದಾರೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಕಿಡಿಗೇಡಿಗಳು ಯಾರೇ ಇದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ದೂರವಾಣಿ ಮೂಲಕ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ನಿನ್ನೆ(ಭಾನುವಾರ) ಶಿವಮೊಗ್ಗದ ರಾಗಿ ಗುಡ್ಡದಲ್ಲಿ ಕಲ್ಲುತೂರಾಟ ನಡೆದು ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ‌ ನಡೆಸಲಾಗಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.

ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, 40 ಜನಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಪೊಲೀಸರ ಮೇಲೂ ಕಲ್ಲು ತೂರಾಟದವಾಗಿದೆ. ಆ ಕಾರಣಕ್ಕಾಗಿ ಲಾಠಿ ಚಾರ್ಜ್​ ಮಾಡಲಾಗಿದೆ. ಸದ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪೊಲೀಸರು ಕ್ರಮ ತೆಗೆದುಕೊಂಡ ಬಳಿಕ ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿಸಿದ್ದರು.

ಬಿಜೆಪಿಗೆ ಕಾಂಗ್ರೆಸ್ ಟೀಕೆ:​ ಈ ಸಂಬಂಧ ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ, ಶಿವಮೊಗ್ಗದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಕಿಡಿಗೇಡಿಗಳ ಪ್ರಯತ್ನವನ್ನು ಪೊಲೀಸ್ ಅಧಿಕಾರಿಗಳು ಸಮರ್ಥ ರೀತಿಯಲ್ಲಿ ತಡೆದಿದ್ದಾರೆ. ಕೋಮು ಸಂಘರ್ಷದ ಮೂಲಕ ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು @BJP4Karnataka ಹಲವು ಬಗೆಯಲ್ಲಿ ಷಡ್ಯಂತ್ರ ನಡೆಸಿದೆ, ಇದನ್ನು ನಮ್ಮ ಪೊಲೀಸರು ಸಮರ್ಥವಾಗಿ ನಿಭಾಯಿಸುವ ಶಕ್ತಿ ಹೊಂದಿದ್ದಾರೆ. ಬಿಜೆಪಿಯ ಯಾವ ಸಂಚುಗಳನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಟೀಕಿಸಿದೆ.

ಇದನ್ನೂ ಓದಿ:144 ಸೆಕ್ಷನ್ ರಾಗಿಗುಡ್ಡಕ್ಕೆ ಸಿಮಿತಗೊಳಿಸಿ, ಇಡೀ ನಗರಕ್ಕೆ ಅನ್ವಯ ಬೇಡ: ಕೆ ಎಸ್​ ಈಶ್ವರಪ್ಪ, ಗೋಪಿನಾಥ್ ಮನವಿ

ಶಿವಮೊಗ್ಗದಲ್ಲಿ ಗಲಭೆ ಡಿಸಿಎಂ ಹೇಳಿದ್ದೇನು?:ಶಿವಮೊಗ್ಗದಲ್ಲಿ ಗಲಭೆ ಕುರಿತು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಪ್ರಚೋದನೆ ನೀಡುವ ಕಟೌಟ್ ಹಾಕುವಂತದ್ದು, ಕಲ್ಲು ತೂರಾಟದಂತಹ ಕೃತ್ಯಕ್ಕೆ ನಮ್ಮ ಸರ್ಕಾರ ಅವಕಾಶ ನೀಡಲ್ಲ ಎಂದು ಶಿವಮೊಗ್ಗದಲ್ಲಿ ಗಲಭೆ ಮಾಡಲು ಸರ್ಕಾರವೇ ಮುಕ್ತ ಅವಕಾಶ ನೀಡಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದರು. ಕಾನೂನು ಕೈಗೆತ್ತಿಕೊಳ್ಳುವ ಯಾರೊಬ್ಬರನ್ನು ನಾವು ಸಹಿಸಿಕೊಳ್ಳುವುದಿಲ್ಲ. ಈ ಘಟನೆಯನ್ನು ನಾವು ಖಂಡಿಸುತ್ತೇವೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆ. ಈ ಘಟನೆ ಹಿಂದೆ ಯಾರೇ ಇದ್ದರೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನಮ್ಮ ರಾಜ್ಯ ಶಾಂತಿಯ ತೋಟವಾಗಿರಬೇಕು. ಕಾನೂನು ಎಲ್ಲರಿಗೂ ಒಂದೇ ಎಂದು ತಿಳಿಸಿದರು.

ABOUT THE AUTHOR

...view details