ಕರ್ನಾಟಕ

karnataka

ETV Bharat / state

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಮಹತ್ವದ ನಿರ್ಣಯಗಳು ಹೀಗಿವೆ - ಕರ್ನಾಟಕ ನೀರಾವರಿ ನಿಗಮ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.

ಸಚಿವ ಹೆಚ್ ಕೆ ಪಾಟೀಲ್
ಸಚಿವ ಹೆಚ್ ಕೆ ಪಾಟೀಲ್

By ETV Bharat Karnataka Team

Published : Dec 21, 2023, 9:19 PM IST

ಸಂಪುಟ ಸಭೆಯ ನಿರ್ಧಾರಗಳ ಕುರಿತು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ

ಬೆಂಗಳೂರು:ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸರ್ಕಾರ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಸಮ್ಮೇಳನ ಸಭಾಂಗಣದಲ್ಲಿ ಮಾಹಿತಿ ನೀಡಿದರು.

ಪ್ರಮುಖ ನಿರ್ಣಯಗಳು: ರಾಷ್ಟ್ರೀಯ ಉಚಿತ ರೋಗ ಪತ್ತೆ ಮತ್ತು ಉಚಿತ ಔಷಧಿ ಸೇವೆಗಳ ಕಾರ್ಯಕ್ರಮದಡಿಯಲ್ಲಿ (NFDS) ವಿವಿಧ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿರುವ ಲ್ಯಾಬ್‌ಗಳಿಗೆ ಅಗತ್ಯವಿರುವ ರಾಸಾಯನಿಕಗಳು ಹಾಗೂ ಕಂಪ್ಯೂಟರ್ ರೇಡಿಯಾಗ್ರಫಿ ಸಿಸ್ಟಂಗಳಿಗೆ Dry Laser X ray Films & 50.15 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಒಪ್ಪಿಗೆ.

ಬೆಂಗಳೂರು ನಗರ ಸಂಚಾರ ವಿಭಾಗ ವ್ಯಾಪ್ತಿಯಲ್ಲಿ 136 ಸಂಚಾರಿ ಸಿಗ್ನಲ್ ವ್ಯವಸ್ಥೆಗಳನ್ನು ಉನ್ನತೀಕರಿಸಲು ಮತ್ತು ಅಡಾಪ್ಟಿವ್ ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಸಿಂಕ್ರೋನೈಸೇಶನ್ ಮಾಡಲು ಹಾಗೂ 29 ಸ್ಥಳಗಳಲ್ಲಿ ಹೊಸ ಅಡಾಪ್ಟಿವ್ ಸಂಚಾರ ವ್ಯವಸ್ಥೆ ನಿಯಂತ್ರಣಗಳನ್ನು ಅಳವಡಿಸಿ ಸಿಂಕ್ರೋನೈಸೇಶನ್ ಮಾಡಲು ಹಾಗೂ 165 ಅಡಾಪ್ಟವ್ ಸಂಚಾರ ವ್ಯವಸ್ಥೆ ನಿಯಂತ್ರಣ ಘಟಕಗಳನ್ನು 5 ವರ್ಷಗಳ ಅವಧಿಗೆ ನಿರ್ವಹಿಸುವ ಕಾಮಗಾರಿಗಳನ್ನು ಒಟ್ಟು 58.54 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 300 ಎಲೆಕ್ಟ್ರೀಕ್ ಬಸ್​ಗಳನ್ನು (ಎಸಿ -75, ನಾನ್ ಎಸಿ -225) ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 450 ನಾನ್-ಎ.ಸಿ ಎಲೆಕ್ಟ್ರಿಕ್ ಬಸ್​ಗಳನ್ನು ಜೆ.ಸಿ.ಸಿ ಆಧಾರದ ಮೇಲೆ ಕಾರ್ಯಾಚರಣೆಗೊಳಿಸಲು ಅನುಮೋದನೆ ನೀಡಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅವಶ್ಯಕವಿರುವ ಒಟ್ಟು 449 ಸಿಬ್ಬಂದಿ ಸೇವೆಯನ್ನು 11.30 ಕೋಟಿ ರೂ.ಗಳ ಮೊತ್ತದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ.

"ಕಾನೂನು ಮತ್ತು ನೀತಿ-2023" ಇದಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್ ಸಬ್ ಕಮಿಟಿ ರಚನೆ ಮಾಡಲು ಸಿಎಂಗೆ ಅಧಿಕಾರ ನೀಡಲಾಗಿದೆ. ಸಿಎಂ ಸಬ್ ಕಮಿಟಿ ರಚನೆ ಮಾಡುತ್ತಾರೆ. ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2023ಕ್ಕೆ ಅನುಮೋದನೆ ದೊರೆತಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಉದ್ದೇಶಗಳು ಹಾಗೂ ಪ್ರಕ್ರಿಯೆಗಳನ್ನು ಪರಿಷ್ಕರಿಸುವುದಕ್ಕೆ ಒಪ್ಪಿಗೆ.

ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಸಲರು, ಗೌಡಲು, ಗೊಂಡ ಮತ್ತು ಬೆಟಿಕುರುಬ ಜನಾಂಗದ ಕುಟುಂಬಗಳಿಗೆ ವರ್ಷದ 12 ತಿಂಗಳು ಪೌಷ್ಠಿಕ ಆಹಾರವನ್ನು ಉಚಿತವಾಗಿ 120 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಸರಬರಾಜು ಮಾಡುವ ಯೋಜನೆ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು ರಾಜ್ಯ ನಗರ ಸಾರಿಗೆ ನಿಧಿಯಡಿ ಮಂಜೂರು ಮಾಡಿರುವ ಅನುದಾನದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಅನುಮೋದಿತ 20 ಎಲೆಕ್ಟ್ರಿಕ್​ ಮಿನಿ ಬಸ್​ಗಳನ್ನು ಖರೀದಿಸುವ ಬದಲಾಗಿ 20 ಸಂಖ್ಯೆಯ ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್​ ಬಸ್​ಗಳನ್ನು ಜಿ.ಸಿ.ಸಿ ಆಧಾರದ ಮೇಲೆ ಕಾರ್ಯಾಚರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮೈಸೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಬಾಕಿ ಇರುವ ಕಾಮಗಾರಿಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ನಿಧಿ-1 ರಡಿಯಲ್ಲಿ 19.10 ಕೋಟಿ ರೂ.ಗಳ ಮೊತ್ತದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿ ಮತ್ತು ಆಡಳಿತ ನಿಯಂತ್ರಣದಲ್ಲಿರುವ ಕೆಲವು ಯೋಜನೆಗಳ ಕಾಮಗಾರಿಗಳ ಆಸ್ತಿ ಮತ್ತು ಹೊಣೆಗಾರಿಕೆಯನ್ನು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ ವರ್ಗಾಯಿಸಲು ಸಂಪುಟ ಸಮ್ಮತಿಸಿದೆ.

ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ಫೆಬ್ರವರಿಯಲ್ಲಿ ನಡೆಸುವ ಸಂಬಂಧ ಚರ್ಚೆ ನಡೆಯಿತು. ಕೋವಿಡ್ ಬಗ್ಗೆ ಚರ್ಚೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕೋವಿಡ್ ಕ್ಯಾಬಿನೆಟ್ ಸಬ್ ಕಮಿಟಿ ರಚಿಸಲು ನಿರ್ಧಾರ.

ಇದನ್ನೂ ಓದಿ:ನಿಗಮ ಮಂಡಳಿಗಳ ನೇಮಕಪಟ್ಟಿ ಶೀಘ್ರದಲ್ಲೇ ಆಗಲಿದೆ: ಸಚಿವ ರಾಮಲಿಂಗಾರೆಡ್ಡಿ

ABOUT THE AUTHOR

...view details