ಕರ್ನಾಟಕ

karnataka

ETV Bharat / state

ವಿಶೇಷ ವಿಮಾನದಲ್ಲಿ ಪ್ರಯಾಣ: ವಿರೋಧಿಸುವ ನೈತಿಕತೆ ಬಿಜೆಪಿಗರಿಗೆ ಇದೆಯೇ?- ಸಿಎಂ ಸಿದ್ದರಾಮಯ್ಯ - etv bharat karnataka

ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಲು ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Etv Bharatcm-siddaramaih-criticized-bjp-leaders-over-luxury-jet-journey
ವಿಶೇಷ ವಿಮಾನದಲ್ಲಿ ಪ್ರಯಾಣ; ವಿರೋಧಿಸುವ ನೈತಿಕತೆ ಬಿಜೆಪಿಗರಿಗೆ ಇದೆಯೇ?: ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Dec 22, 2023, 6:36 PM IST

ಬೆಂಗಳೂರು: "ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು-ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ" ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಐಷಾರಾಮಿ ಜೆಟ್‌ನಲ್ಲಿ ಪ್ರಯಾಣಿಸಿದ ಕುರಿತು ವ್ಯಕ್ತವಾಗುತ್ತಿರುವ ಟೀಕೆಗಳ ಬಗ್ಗೆ ಇಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, "ರಾಜ್ಯದ ಬರ ಪರಿಸ್ಥಿತಿ ಸಂಬಂಧ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ" ಎಂದು ಪ್ರಶ್ನಿಸಿದ್ದಾರೆ.

"2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ?" ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:ಜಮೀರ್ ವಿಮಾನ ಪ್ರಯಾಣದ ವಿಡಿಯೋ ವೈರಲ್ ವಿಚಾರ: ಬಿಜೆಪಿ ವಾಗ್ದಾಳಿ

ಪ್ರಧಾನಿ ಮೋದಿ ಓಡಾಡುವ ಫ್ಲೈಟ್ ಎಂಥದ್ದು- ಸಿಎಂ: ಇದೇ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ, ಪ್ರಧಾನಿ ನರೇಂದ್ರ ಮೋದಿ ಯಾವ ಫ್ಲೈಟ್​ನಲ್ಲಿ ಓಡಾಡುತ್ತಾರೆ?. ಅವರದು ಐಷಾರಾಮಿ ಫ್ಲೈಟ್ ಅಲ್ಲವೇ?, ದೇಶದಲ್ಲಿ ಯಾವುದೇ ಪರಿಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂಥದ್ದು? ಎಂದು ಮೊದಲು ಬಿಜೆಪಿಯವರಿಗೆ ಕೇಳಿ ಎಂದು ಕಿಡಿಕಾರಿದ್ದರು.

ABOUT THE AUTHOR

...view details