ಕರ್ನಾಟಕ

karnataka

ETV Bharat / state

ಮಾಸಲು ಬಟ್ಟೆ, ಹರಕಲು ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ: ಅಧಿಕಾರಿಗಳಿಗೆ ಸಿಎಂ ಕರೆ - ವಾರ್ಷಿಕ ಕ್ಯಾಲೆಂಡರ್

ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತೀರಿ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು, ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

Etv Bharatcm-siddaramaiah-has-called-on-officials-to-respond-to-poor-people
ಮಾಸಲು ಬಟ್ಟೆ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ: ಅಧಿಕಾರಿಗಳಿಗೆ ಸಿಎಂ ಕರೆ

By ETV Bharat Karnataka Team

Published : Jan 3, 2024, 9:25 PM IST

ಬೆಂಗಳೂರ: ಮಧ್ಯವರ್ತಿಗಳನ್ನು ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಿ. ಜನರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕರೆ ನೀಡಿದರು.

ಬುಧವಾರ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ನೀವು ಒಳ್ಳೆಯ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದರು.

ದಿನಚರಿ, ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ

ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತೀರಿ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು, ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ. ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯುದಯ ನಮ್ಮ ಗುರಿ ಆಗಬೇಕು ಎಂದು ಹೇಳಿದರು.

ಬಲಾಢ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಿ. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ಸಿಎಂ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಸಿಎಂ ಎಚ್ಚರಿಸಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಮರಣಿಕೆ ನೀಡಿದ ಅಧಿಕಾರಿಗಳು

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಂದಾಯ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆ ಆಯುಕ್ತ ಪಿ. ಸುನಿಲ್ ಕುಮಾರ್, ಸಂಘದ ಉಪಾಧ್ಯಕ್ಷ ಚನ್ನಬಸಪ್ಪ ವೇದಿಕೆಯಲ್ಲಿದ್ದರು.

ಇದನ್ನೂ ಓದಿ:ಶ್ರೀಕಾಂತ್ ಪೂಜಾರಿಯನ್ನು ಬಂಧಿಸದೇ ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details