ಕರ್ನಾಟಕ

karnataka

ETV Bharat / state

ಕುಮಾರಸ್ವಾಮಿ ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ - ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ಸರಣಿ ಟ್ವೀಟ್​ಗೆ ಸಿಎಂ ಸಿದ್ದರಾಮಯ್ಯ ಟಕ್ಕರ್​ ನೀಡಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Nov 19, 2023, 2:32 PM IST

ಬೆಂಗಳೂರು:ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್​ಗಳನ್ನೂ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರ ಟ್ವೀಟ್​ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.

ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ:ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಮುಖ್ಯಮಂತ್ರಿಗಳು, ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.

ಐಕ್ಯತಾ ಪ್ರಮಾಣ ವಚನ ಬೋಧನೆ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿವಂಗತ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲ್ಪಡುವ ರಾಷ್ಟ್ರೀಯ ಐಕ್ಯತೆ ದಿನದ ಅಂಗವಾಗಿ ಐಕ್ಯತಾ ಪ್ರಮಾಣ ವಚನವನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೋಧಿಸಿದರು.

ಇದನ್ನೂ ಓದಿ:ಅಧಿಕಾರ ಕೈಗೆ ಸಿಗದೆ ಹೆಚ್​ಡಿಕೆ ಮಾನಸಿಕ ಸ್ವಾಸ್ತ್ಯ ಕಲಕಿದ ಹಾಗೆ ಕಾಣುತ್ತಿದೆ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details