ಬೆಂಗಳೂರು: ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಶಾಸಕರಾದ ಬಸವರಾಜ್ ರಾಯರೆಡ್ಡಿ, ಬಿ.ಆರ್.ಪಾಟೀಲ್, ಆರ್.ವಿ.ದೇಶಪಾಂಡೆ ಅವರನ್ನು ವಿವಿಧ ಹುದ್ದೆಗಳಿಗೆ ನೇಮಿಸಿ ಇಂದು ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ.
ಬಸವರಾಜ್ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಬಿ.ಆರ್.ಪಾಟೀಲ್ ಮುಖ್ಯಮಂತ್ರಿಯ ಸಲಹೆಗಾರರಾಗಿದ್ದಾರೆ. ಆರ್.ವಿ.ದೇಶಪಾಂಡೆ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರಾಗಿದ್ದಾರೆ. ಮೂವರಿಗೂ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದೆ. ಈ ಮೂವರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದರು.