ಕರ್ನಾಟಕ

karnataka

ETV Bharat / state

ಗುತ್ತಿಗೆದಾರರ ಬಿಲ್ ಬಾಕಿ - ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಹಲವು ವಿಚಾರವಾಗಿ ಮಾತನಾಡಿದರು.

CM Siddaramaiah
ಸಿಎಂ ಸಿದ್ದರಾಮಯ್ಯ

By

Published : Aug 12, 2023, 2:05 PM IST

Updated : Aug 12, 2023, 2:27 PM IST

ಸಿಎಂ ಸಿದ್ದರಾಮಯ್ಯ

ಮೈಸೂರು: ಗುತ್ತಿಗೆದಾರರ ಬಿಲ್ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ರಾಜ್ಯ ಮಟ್ಟದ ವಕೀಲರ ಪರಿಷತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.

ನನ್ನ ಹುಟ್ಟುಹಬ್ಬ ಆಗಸ್ಟ್ 3, ಆಗಸ್ಟ್ 12 ಎಂಬ ಎರಡು ದಿನಾಂಕಗಳು ಕೂಡ ತಪ್ಪು. ಒಂದನ್ನು ನಮ್ಮ ಮೇಷ್ಟ್ರು ಬರೆಸಿದ್ದರು, ಮತ್ತೊಂದನ್ನು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಅನ್ನು ಬರೆಸಿದ್ದರು. ಈ ಎರಡು ದಿನಾಂಕಗಳು ಕೂಡ ತಪ್ಪು. ನನ್ನ ಜನ್ಮದಿನಾಂಕ ನನಗೆ ಸರಿಯಾಗಿ ಗೊತ್ತಿಲ್ಲ. ಹಾಗಾಗಿ ನನ್ನ ಹುಟ್ಟುಹಬ್ಬದ ದಿನಾಂಕದ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ ಎಂದು ತಿಳಿಸಿದರು.

ಏಕರೂಪ ನಾಗರಿಕ ಸಂಹಿತೆ: ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ವಿಚಾರದಲ್ಲಿ ನಮ್ಮ ವಿರೋಧವಿದೆ. ಈಗಾಗಲೇ ಕೇರಳ ರಾಜ್ಯ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದೆ. ನಾವು ಸಹ ಇದನ್ನು ವಿರೋಧಿಸಿದ್ದೇವೆ ಎಂದು ತಿಳಿಸಿದರು.

ತಮಿಳುನಾಡಿಗೆ ನೀರು ಬಿಡುವ ವಿಚಾರ: ತಮಿಳುನಾಡು ಕಾವೇರಿ ನೀರು ಬಿಡುವಂತೆ ಕೇಳುತ್ತಿದೆ. ಈ ಬಾರಿ ನಿರೀಕ್ಷಿತ ಮಳೆಯಾಗಿಲ್ಲ. ಹೀಗಾಗಿ ಸಂಕಷ್ಟ ಸೂತ್ರಗಳನ್ನು ಎರಡು ರಾಜ್ಯಗಳೂ ಪಾಲಿಸಬೇಕಾಗಿದೆ. ಆದರೂ ತಮಿಳುನಾಡು ನೀರು ಬಿಡುವಂತೆ ಕೇಳಲು ಶುರು ಮಾಡಿದೆ. ಈ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ. ಆನಂತರ ಮುಂದಿನ ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು.

ಬಿಲ್​​ಗೆ ಆತುರವೇಕೆ?ಗುತ್ತಿಗೆದಾರರ ಬಿಲ್ ಬಾಕಿ ವಿಚಾರದಲ್ಲಿ ಶೇ 40ರಷ್ಟು ಕಮಿಷನ್ ಬಗ್ಗೆ ತನಿಖೆ ಆಗದೇ ಬಿಲ್ ಬಿಡುಗಡೆ ಮಾಡಲು ಹೇಗೆ ಸಾಧ್ಯ?. ತನಿಖೆ ಪ್ರಗತಿಯಲ್ಲಿದ್ದು, ತಪ್ಪು ಮಾಡದೇ ಇರುವವರಿಗೆ ಯಾವುದೇ ಸಮಸ್ಯೆ ಇಲ್ಲ. ತಪ್ಪು ಮಾಡಿದವರಿಗೆ ಭಯ ಇರುತ್ತದೆ. ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಯವರಿಗೆ ಸದ್ಯ ಬೇರೇ ಏನೂ ವಿಚಾರ ಇಲ್ಲ. ಅದಕ್ಕೆ ಸದ್ಯ ಹೋರಾಟ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.

ಅವರ 40ರಷ್ಟು ಕಮಿಷನನ್ ಆರೋಪದಿಂದಾಗಿ ಜನ ಅವರನ್ನು ತಿರಸ್ಕಾರ ಮಾಡಿದರು. ನಾವು ಅವರ ಮೇಲೆ ಶೇ 40ರಷ್ಟು ಕಮಿಷನ್ ಆರೋಪ ಮಾಡಿದ್ದೆವು. ಈಗ ಆ ಆರೋಪ ಸಾಬೀತು ಮಾಡಬೇಕಾಗಿದ್ದು, ಇದಕ್ಕಾಗಿ 4 ತನಿಖಾ ತಂಡವನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ತನಿಖೆ ಮಾಡಿದ ನಂತರ ಸತ್ಯಾಂಶ ಗೊತ್ತಾಗಲಿದೆ. ನಡೆದಿರುವ ಎಲ್ಲ ಕಾಮಗಾರಿಗಳು 3 ವರ್ಷದಲ್ಲಿ ಮುಕ್ತಾಯವಾಗಿದೆ. ಈಗ ಬಿಲ್ಲಿಗೆ ಆತುರಪಟ್ಟರೆ ಹೇಗೆ ಎಂದು ಮುಖ್ಯಮಂತ್ರಿಗಳು ಪ್ರಶ್ನೆ ಮಾಡಿದರು.

ಜೊತೆಗೆ ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದೇನೆ. ಎಲ್ಲರಿಗೂ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ ಎಂದರು.

ಸಿಜೆ ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕಾತಿ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಾಧೀಶರನ್ನು ಹೊರಗಿಟ್ಟು, ತಮಗೆ ಬೇಕಾದವರನ್ನು ಚುನಾವಣಾ ಆಯುಕ್ತರನ್ನಾಗಿ ಮಾಡಲು ಹೊರಟಿದ್ದಾರೆ. ಇದೊಂದು ಷಡ್ಯಂತ್ರ ಎಂದು ಬೇಸರ ವ್ಯಕ್ತಪಡಿಸಿದ ಸಿಎಂ, ಐಪಿಸಿ ಸೇರಿದಂತೆ ಹಲವು ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದ್ದಾರೆ. ಐಪಿಸಿ 1861ರಲ್ಲಿ ರಚನೆಯಾದ ಕಾನೂನು. ಇದನ್ನು ಏನು ಮಾಡುತ್ತಾರೋ ಎಂಬುದನ್ನು ಕಾದು ನೋಡೋಣ ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದರು.

ಗೃಹ ಲಕ್ಷ್ಮಿಗೆ 1.33 ಕೋಟಿ ಜನರ ನೊಂದಣಿ ಆಗಬೇಕು:ಗೃಹ ಲಕ್ಷ್ಮಿ ಯೋಜನೆಗೆ 1.33 ಕೋಟಿ ಜನರ ನೊಂದಣಿ ಆಗಬೇಕು. ಇಲ್ಲಿಯವರೆಗೆ 1.6 ಕೋಟಿ ಮಹಿಳೆಯರು ಮಾತ್ರ ನೋಂದಣಿ ಮಾಡಿಸಿದ್ದಾರೆ. ಇನ್ನೂ ನೋಂದಣಿ ಬಾಕಿ ಇದೆ. ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ. ದಿನಾಂಕ ಮುಂದೂಡಿಕೆ ಆಗುವುದಿಲ್ಲ. ಗೃಹ ಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಯವರ ಸಮಯ ಕೇಳಿದ್ದೇವೆ. ಆದರೆ, ಅವರು ಸಮಯ ನೀಡಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ:ವಿದ್ಯುತ್​ ಪ್ರವಹಿಸಿ ಅಜ್ಜ, ಅಜ್ಜಿ, ಮೊಮ್ಮಗಳು ಸಾವು.. ​ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಡಿಸೆಂಬರ್ ನಂತರ ಯುವನಿಧಿ ಯೋಜನೆ ಜಾರಿ: ಪದವಿ ಮುಗಿಸಿ, ಆರು ತಿಂಗಳು ಕೆಲಸ ಸಿಗದೇ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ. ಡಿಸೆಂಬರ್ ನಂತರ ಜನವರಿಯಲ್ಲಿ ಯುವನಿಧಿ ಯೋಜನೆ ಜಾರಿ ಮಾಡುತ್ತೇವೆ. ಬಿಎ, ಬಿಎಸ್ಸಿ, ಬಿಕಾಂ, ಎಂಕಾಂ ಹಾಗೂ ಎಂಎಸ್ಸಿ ಸೇರಿದಂತೆ ಇತರ ಡಿಗ್ರಿಗಳನ್ನು ಮಾಡಿರುವ ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 3000 ರೂ. ಹಣ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂಪಾಯಿ ಹಣ ನೀಡುತ್ತೇವೆ. ಯುವನಿಧಿ ಜನವರಿ ತಿಂಗಳಲ್ಲಿ ಜಾರಿ ಆಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Last Updated : Aug 12, 2023, 2:27 PM IST

ABOUT THE AUTHOR

...view details