ಕರ್ನಾಟಕ

karnataka

ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ಸಿಗಬಹುದು: ಸಿದ್ದರಾಮಯ್ಯ

By ETV Bharat Karnataka Team

Published : Dec 10, 2023, 12:55 PM IST

Updated : Dec 10, 2023, 2:12 PM IST

CM Siddaramaiah statement on IT raids: ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ಸಿಗಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು:ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆಯಿಂದ (ಐಟಿ) ದಾಳಿ ಮಾಡಿಸಲಾಗುತ್ತಿದೆ. ಬಿಜೆಪಿಯವರ ಮೇಲೆ ದಾಳಿಗಳೇ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ವಿಧಾನಸೌಧದಲ್ಲಿ ಇಂದು ದಿವಂಗತ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಸೌಲಭ್ಯವಿಲ್ಲವೆನ್ನುವ ಕಾಂಗ್ರೆಸ್‌ನವರ ಮನೆಯಲ್ಲಿಯೇ ಅಪಾರ ಪ್ರಮಾಣದ ಹಣ ದೊರೆಯುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇಬೇಕು. ಆದರೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿ ಪಕ್ಷದವರ ಮೇಲೆ ದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದರು.

ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ: 50 ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದವರು ಎಸ್.ನಿಜಲಿಂಗಪ್ಪ. ರಾಜ್ಯ ಕರ್ನಾಟಕವೆಂದು ನಾಮಕರಣವಾದ ನಂತರದ ಮೊದಲ ಮುಖ್ಯಮಂತ್ರಿಯಾದ ಎಸ್.ನಿಜಲಿಂಗಪ್ಪನವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು. ಕರ್ನಾಟಕದ ಏಕೀಕರಣದಲ್ಲೂ ಭಾಗಿಯಾಗಿದ್ದರು. ಅವರ ಅವಧಿಯಲ್ಲಿ ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಜಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹೇಳಿದರು.

ಇದನ್ನೂ ಓದಿ:'ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ': ರಾಹುಲ್ ಗಾಂಧಿ ರಾಜೀನಾಮೆಗೆ ಎನ್.ರವಿಕುಮಾರ್ ಆಗ್ರಹ

Last Updated : Dec 10, 2023, 2:12 PM IST

ABOUT THE AUTHOR

...view details