ಬೆಂಗಳೂರು:ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಕೊರೊನಾ ತಗುಲಿದ್ದು, ಅವರ ಸಂಪರ್ಕಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೋಂ ಕ್ವಾರಂಟೈನ್ ಆಗಿದ್ದಾರೆ.
ಸಂಸದ ಶ್ರೀನಿವಾಸ್ ಪ್ರಸಾದ್ಗೆ ಕೊರೊನಾ ಪಾಸಿಟಿವ್ ದೃಢ: ಸಿಎಂ ಪುತ್ರ ವಿಜಯೇಂದ್ರ ಹೋಂ ಕ್ವಾರಂಟೈನ್
ಸಂಸದ ವಿ. ಶ್ರೀನಿವಾಸ್ ಪ್ರಸಾದ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ನಾನೂ ಸಹ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ಹಿರಿಯ ನಾಯಕ, ಸಂಸತ್ ಸದಸ್ಯ ವಿ. ಶ್ರೀನಿವಾಸ್ ಪ್ರಸಾದ್ ಶೀಘ್ರದಲ್ಲಿ ಕೊರೊನಾ ಸೊಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಅವರ ಸಂಪರ್ಕಕ್ಕೆ ಬಂದಿದ್ದರಿಂದ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ಎಲ್ಲಾ ಮುಂಜಾತ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ಜೊತೆಗಿದ್ದವರೂ ಸಹ ಎಲ್ಲ ಮುಂಜಾಗ್ರತೆ ವಹಿಸಬೇಕು ಎಂದು ಕೋರಿದ್ದಾರೆ.
ಹಿರಿಯ ನಾಯಕರು, ಮಾಜಿ ಕೇಂದ್ರ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವುದು ನೋವುಂಟುಮಾಡಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.