ಬೆಂಗಳೂರು: ಕರ್ನಾಟಕ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಬೆಂಗಳೂರು ಮೈಸೂರು ರಸ್ತೆ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಕೆಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮಾತುಕತೆ ನಡೆಸಿದರು.
ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು. ನಗರದ ಖಾಸಗಿ ತಾರಾ ಹೋಟೆಲ್ನಲ್ಲಿ ನಿತಿನ್ ಗಡ್ಕರಿ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಸಂಸದರಾದ ಪಿ ಸಿ ಮೋಹನ್, ತೇಜಸ್ವಿ ಸೂರ್ಯ ಭಾಗಿಯಾಗಿದ್ದರು.
ರಾಷ್ಟ್ರೀಯ ಹೆದ್ದಾರಿ ವಿಚಾರವಾಗಿ ಸಿಎಂ ಬೊಮ್ಮಾಯಿ ಮತ್ತು ಗಡ್ಕರಿ ಚರ್ಚೆ ನಡೆಸಿದರು. ಮುಂಬೈ, ಪುಣೆ, ಚೆನ್ನೈ, ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಿಗೆ ಬೆಂಗಳೂರು ಸಂಪರ್ಕಿಸುವ ಹೆದ್ದಾರಿಯನ್ನು ಅಭಿವೃದ್ಧಿ ಮಾಡುವ ವಿಚಾರ ಕುರಿತು ಚರ್ಚೆ ನಡೆಸಲಾಯಿತು.
ಬೆಂಗಳೂರು ಮೈಸೂರು ಹೆದ್ದಾರಿ ವಿಚಾರ ಕೂಡ ಚರ್ಚೆಗೆ ಬಂದಿತು. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ಅವೈಜ್ಞಾನಿಕ ಎಂದು ಟೀಕಿಸುತ್ತಿರುವ ವಿಪಕ್ಷಗಳು, ಉದ್ಘಾಟನೆ ಹಂತದಲ್ಲಿರುವ ಎಕ್ಸ್‌ಪ್ರೆಸ್ ವೇನಲ್ಲಿ ಮಳೆಗೆ ಅನೇಕ ಕಡೆ ನೀರು ತುಂಬಿ ಅಸ್ತವ್ಯಸ್ತವಾಗಿತ್ತು ಎಂದು ದೂರಿವೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಬಗ್ಗೆ ಸಂಪೂರ್ಣವಾಗಿ ಚರ್ಚೆ ನಡೆಸಿದರು. ಇದೇ ವೇಳೆ ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ಧಿ ಸೇರಿದಂತೆ ರಾಜ್ಯದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು.
ಇದನ್ನೂ ಓದಿ :ಬೆಂಗಳೂರು: ಪೃಥ್ವಿ ರೆಡ್ಡಿ, ಭಾಸ್ಕರ್ ರಾವ್ ನೇತೃತ್ವದಲ್ಲಿ ಎಎಪಿಯಿಂದ ಪ್ರವಾಹ ಪ್ರದೇಶಗಳ ಪರಿಶೀಲನೆ....