ಕರ್ನಾಟಕ

karnataka

ETV Bharat / state

ಕೊರೊನಾ ಕಂಟಕದಿಂದ ಪಾರುಮಾಡಿದ ಆಸ್ಪತ್ರೆ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ ಬಿಎಸ್​ವೈ..! - hospital staff

ಕೊರೊನಾದಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ತಮ್ಮ ಜೀವವನ್ನು ಲೆಕ್ಕಿಸಿದೇ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಆರೈಕೆ ಮಾಡುತ್ತಿರುವ ಆರೋಗ್ಯ ಕ್ಷೇತ್ರದ ಎಲ್ಲ ಕೊರೊನಾ ವಾರಿಯರ್ಸ್​ಗೂ ಸಿಎಂ ಕೃತಜ್ಞತೆ ಸಲ್ಲಿಸಿದರು.

CM THINKS TO HOSPITAL TEAM
ಆಸ್ಪತ್ರೆ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ.

By

Published : Aug 10, 2020, 6:23 PM IST

ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದ ವೇಳೆ ವೈದ್ಯಕೀಯ ಆರೈಕೆ ಮಾಡಿದ್ದ ಸಿಬ್ಬಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದು, ಕೋವಿಡ್-19 ನಂತರ ಕ್ಲಿಷ್ಟಕರ ಸನ್ನಿವೇಶದಲ್ಲಿಯೂ ಕರ್ತವ್ಯ ಮರೆಯದ ಆರೋಗ್ಯ ಸಿಬ್ಬಂದಿಗೆ ಸಿಎಂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್-19 ನಿಂದ ಪೂರ್ಣ ಗುಣಮುಖರಾಗಿ ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾದರು. ಆಸ್ಪತ್ರೆಯಿಂದ ಮರಳುವ ವೇಳೆ ತಮಗೆ ಚಿಕಿತ್ಸೆ ನೀಡಿದ ವೈದ್ಯರು, ಶುಶ್ರೂಷಕರು, ಸಿಬ್ಬಂದಿಗೆ ಮುಖ್ಯಮಂತ್ರಿ ಬಿಎಸ್​ವೈ ಧನ್ಯವಾದ ಸಲ್ಲಿಸಿದ್ದಾರೆ.

ಆಸ್ಪತ್ರೆ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ.

ಕೊರೊನಾದಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ತಮ್ಮ ಜೀವವನ್ನು ಲೆಕ್ಕಿಸಿದೇ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ವೈದ್ಯಕೀಯ ಸಿಬ್ಬಂದಿ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಆರೈಕೆ ಮಾಡುತ್ತಿರುವ ಆರೋಗ್ಯ ಕ್ಷೇತ್ರದ ಎಲ್ಲ ಕೊರೊನಾ ವಾರಿಯರ್ಸ್​ಗೂ ಕೃತಜ್ಞತೆ ಸಲ್ಲಿಸಿದರು. ಇನ್ನು ಇದೇ ವೇಳೆ ತಮ್ಮ ಚೇತರಿಕೆಗಾಗಿ ಹಾರೈಸಿದ ಸಮಸ್ತ ನಾಡಿದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಿಎಂ ಮರೆಯಲಿಲ್ಲ.

ABOUT THE AUTHOR

...view details