ಕರ್ನಾಟಕ

karnataka

ETV Bharat / state

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ವಹಿಸಿದ ಸಿಎಂ: ರಾಮಲಿಂಗಾರೆಡ್ಡಿ ಹೇಳಿದ್ದೇನು?

ಸಿಎಂ ಯಡಿಯೂರಪ್ಪ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದಾರೆ. ನಾನು ಈ ಹಿಂದೆ ಎರಡು ಬಾರಿ ಸುದ್ದಿಗೋಷ್ಟಿಯಲ್ಲಿ ಹೇಳಿದ್ದೆ. ಅಂದು ನಾನು ಹೇಳಿದ್ದನ್ನು ಸೇರಿಸಿ ಯಡಿಯೂರಪ್ಪ ಅವರು ತನಿಖೆ ಮಾಡಿಸಲಿ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ.

ಮಾಜಿ ಸಚಿವ ರಾಮಲಿಂಗಾರೆಡ್ಡಿ

By

Published : Aug 18, 2019, 5:39 PM IST

Updated : Aug 18, 2019, 8:15 PM IST

ಬೆಂಗಳೂರು: ಫೋನ್ ಕದ್ದಾಲಿಕೆ ತಪ್ಪಲ್ವಾ? ಈ ಹಿಂದೆ ರಾಮಕೃಷ್ಣ ಹೆಗಡೆ ರಾಜೀನಾಮೆ ಕೊಟ್ರು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ವಹಿಸಿದ ಸಿಎಂ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದಾರೆ. ನಾನು ಈ ಹಿಂದೆ ಎರಡು ಬಾರಿ ಸುದ್ದಿಗೋಷ್ಟಿ ಮಾಡಿ ಈ ಬಗ್ಗೆ ಹೇಳಿದ್ದೆ. ಅಂದು ನಾನು ಹೇಳಿದ್ದನ್ನು ಸೇರಿಸಿ ಯಡಿಯೂರಪ್ಪ ಅವರು ತನಿಖೆ ಮಾಡಿಸಲಿ ಎಂದು ಒತ್ತಾಯಿಸಿದರು.

ಸಿಬಿಐ ಒಳ್ಳೆಯ ಸಂಸ್ಥೆ. ಅದನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಹಲವು ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ, ಇಡಿ ಹೀಗೆ ಚುನಾವಣೆ ಸಂದರ್ಭದಲ್ಲಿ ಹೇಗೆ ಮಾಡಿದ್ರು ಅನ್ನೋದನ್ನು ನೀವು ನೋಡಿದ್ದೀರಾ? ಕೇಂದ್ರದಲ್ಲಿರುವ ಇಬ್ಬರು ವ್ಯಕ್ತಿಗಳು ಇವುಗಳನ್ನು ನಿಯಂತ್ರಣ ಮಾಡುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಆರೋಪಿಸಿದ್ರು.

Last Updated : Aug 18, 2019, 8:15 PM IST

ABOUT THE AUTHOR

...view details