ಕರ್ನಾಟಕ

karnataka

ETV Bharat / state

ಕೊರೊನಾ ಗುಣಮುಖರಾದವರ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ ಸಿಎಂ - Dollars Colony Residence

ಕೊರೊನಾ ವೈರಸ್ ಮುಕ್ತರಾಗಿ ಬಂದ ಆರು ಜನರೊಂದಿಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ.

CM
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

By

Published : Mar 31, 2020, 12:24 PM IST

ಬೆಂಗಳೂರು:ಕೊರೊನಾ ಸೋಂಕಿಗೆ ಸಿಲುಕಿ ಗುಣಮುಖರಾದವರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸ್‌ ವ್ಯವಸ್ಥೆ ಮಾಡಿದ್ದು, ಆರು ಜನರೊಂದಿಗೆ ಸಿಎಂ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಅವರು ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ವಿಚಾರ ವಿನಿಮಯ ಮಾಡಲಿದ್ದಾರೆ.
ಈ ನಡುವೆ ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದು, ಉಸ್ತುವಾರಿ ಹೊತ್ತಿರುವ ಚಾಮರಾಜನಗರ ಜಿಲ್ಲೆ ಹಾಗೂ ತಮ್ಮ ಸ್ವಕ್ಷೇತ್ರ ರಾಜಾಜಿನಗರದ ಪರಿಸ್ಥಿತಿ ಮತ್ತು ಕೈಗೊಂಡಿರುವ ವ್ಯವಸ್ಥೆ ಬಗ್ಗೆ ವಿವರಿಸಿದ್ದಾರೆ.

ABOUT THE AUTHOR

...view details