ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೀಳ್ಕೊಡುಗೆ ಔತಣಕೂಟದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ನವದೆಹಲಿಗೆ ತೆರಳುತ್ತಿದ್ದಾರೆ.
ರಾಷ್ಟ್ರಪತಿಯಾಗಿ ನಾಳೆ ಅಧಿಕಾರವಧಿ ಪೂರ್ಣಗೊಳಿಸುತ್ತಿರುವ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದು, ಔತಣಕೂಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ನಾಳೆ ಮಧ್ಯಾಹ್ನ 2.55 ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣಿಸಲಿರುವ ಸಿಎಂ ಬೊಮ್ಮಾಯಿ, ರಾತ್ರಿ 8 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.