ಬೆಂಗಳೂರು :ವೀರಶೈವ-ಲಿಂಗಾಯತ ಸಮುದಾಯವನ್ನು ಓಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ವಸತಿ ಸಚಿವ ವಿ. ಸೋಮಣ್ಣ ಅವರು, ತಾಂತ್ರಿಕವಾಗಿ ಏನು ಮಾಡಬೇಕೆಂಬ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆದುಕೊಂಡಿದ್ದಾರೆ. ಇವತ್ತಿನ ಸಭೆಯಲ್ಲಿ ಓಬಿಸಿ ಶಿಫಾರಸು ಬಗ್ಗೆ ಚರ್ಚೆ ಆಗಲಿಲ್ಲ. ವಿಷಯ ಮುಂದೂಡಿಕೆಯಾಗಿದೆ ಎಂದು ಹೇಳಿದ್ದಾರೆ.
ವಿಕಾಸಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲ ರೀತಿಯಲ್ಲೂ ಪರಿಶೀಲಿಸಿ ಇದರ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.