ಬೆಂಗಳೂರು: ಕೇಂದ್ರ ಸರ್ಕಾರ ಅಣೆಕಟ್ಟುಗಳ ಪುನರುಜ್ಜೀವನ ಮತ್ತು ಸುಧಾರಣಾ ಯೋಜನೆಯ ಎರಡು ಹಾಗು ಮೂರನೇ ಹಂತದ ಅನುಮೋದನೆ ಮಾಡಿದ್ದನ್ನು ರಾಜ್ಯ ಸರ್ಕಾರ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಅಣೆಕಟ್ಟು ಸುಧಾರಣಾ ಯೋಜನೆಗೆ ಅನುಮೋದನೆ: ಕೇಂದ್ರದ ನಿರ್ಧಾರ ಸ್ವಾಗತಿಸಿದ ಸಿಎಂ
ಅಣೆಕಟ್ಟು ಸುಧಾರಣಾ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಿಎಂ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
bsy
ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ಅನುಭವವನ್ನು ಗಮನದಲ್ಲಿಟ್ಟುಕೊಂಡು, ಹಾಲಿ ಇರುವ ಯೋಜನೆಗಳ ಜೊತೆಗೆ ಹೊಸ ಯೋಜನೆಗಳು ಭಾರತದಲ್ಲಿ ಅಣೆಕಟ್ಟು ಸುರಕ್ಷತಾ ಸಂಸ್ಕೃತಿಯಲ್ಲಿ ಬದಲಾವಣೆಗಳನ್ನು ತರುವಲ್ಲಿ ವೇಗವರ್ಧಕವಾಗಲಿದೆ ಎಂದು ನಾವು ವಿಶ್ವಾಸದಿಂದ ಹೇಳಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.