ಕರ್ನಾಟಕ

karnataka

ETV Bharat / state

ಗಡಿ ವಿಚಾರದಲ್ಲಿ ಮಹಾಜನ್ ವರದಿ ಅಂತಿಮ,‌ ಉದ್ಧವ್ ಹೇಳಿಕೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧ.. ಸಿಎಂ ಬಿಎಸ್​​ವೈ - cm BSY tweet

CM_TWEET_ABOUT_TAKRE_STATEMENT
ಸಿಎಂ ಬಿಎಸ್​​ವೈ

By

Published : Jan 18, 2021, 10:49 AM IST

Updated : Jan 18, 2021, 11:11 AM IST

11:05 January 18

ಮಹಾ ಸಿಎಂಗೆ ಕರುನಾಡ ಸಿಎಂ ಟಕ್ಕರ್​​

ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕ ಎಂದು ಸಿಎಂ ಬಿ ಎಸ್​ ಯಡಿಯೂರಪ್ಪ ಹೇಳಿದ್ದಾರೆ.

11:05 January 18

ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕ: ಬಿಎಸ್​ವೈ

10:40 January 18

'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಕುರಿತು ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು ಎಂದು ಸಿಎಂ ಬಿಎಸ್​​ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು:ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮವಾಗಿದ್ದು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ದೇಶದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಕುರಿತು ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ.

ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.

ಓದಿ : ಉದ್ಧವ್ ಠಾಕ್ರೆ 'ಉದ್ಧ'ಟತನದ ಹೇಳಿಕೆಗೆ ಖಂಡನೆ: ಕನ್ನಡಪರ ಹೋರಾಟಗಾರರ ಪ್ರತಿಭಟನೆ

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

Last Updated : Jan 18, 2021, 11:11 AM IST

ABOUT THE AUTHOR

...view details