ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಕ್ರಮ: ಸಿಎಂ ಬಿಎಸ್ವೈ ಟ್ವೀಟ್.. - CM tweet for Toyota Kirloskar workers problem solving
ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದ್ದು, ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ..

ಸಿಎಂ ಬಿಎಸ್ವೈ
ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಕಂಪನಿ ಲಾಕೌಟ್ನಿಂದ ಕಾರ್ಮಿಕರು ಸಂಕಷ್ಟ ಎದುರಿಸುತ್ತಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಪ್ರವೇಶ ಮಾಡಿದ್ದು, ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಕಾರ್ಮಿಕ ಮುಖಂಡರು ಹಾಗೂ ಕಂಪನಿ ಜೊತೆ ಸಂಧಾನ ಸಭೆ ಕರೆದಿದ್ದು, ಸಭೆಯಲ್ಲಿ ಮಾತುಕತೆ ಮೂಲಕ ಸಮಸ್ಯೆ ಪರಿಹಾರಕ್ಕೆ ಯತ್ನಿಸಲಿದ್ದಾರೆ. ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಶಿವರಾಮ್ ಹೆಬ್ಬಾರ್ ಸಂಧಾನ ಸಭೆ ನಡೆಸುತ್ತಿದ್ದಾರೆ.