ಬೆಂಗಳೂರು:ಕೋವಿಡ್-19 ನಂತಹ ಆತಂಕದ ಸಂದರ್ಭದಲ್ಲೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.
ಪರೀಕ್ಷೆ ಮುಕ್ತಾಯ: ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಆಶಿಸಿದ ಸಿಎಂ - CM tweet
ಕೋವಿಡ್-19 ನಂತಹ ಆತಂಕದ ಸಂದರ್ಭದಲ್ಲೂ ಪರೀಕ್ಷೆ ಬರೆದ ಎಲ್ಲ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಸಿಗಲೆಂದು ಸಿಎಂ ಟ್ವೀಟ್ ಮಾಡುವ ಮೂಲಕ ಹಾರೈಸಿದ್ದಾರೆ.
ಸಿಎಂ
ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸಿದ ಸಂಪುಟ ಸಹೋದ್ಯೋಗಿ ಸುರೇಶ್ ಕುಮಾರ್, ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಸಮಸ್ತ ಸಿಬ್ಬಂದಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ಹಾಗೆಯೇ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸಹಕರಿಸಿದ ಪೋಷಕರು, ಸ್ವಯಂಸೇವಾ ಸಂಸ್ಥೆಗಳು, ವಿವಿಧ ಸಂಘಟನೆಗಳು ಹಾಗೂ ಸ್ವಯಂಸೇವಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.