ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮಳೆ - ಬೆಳೆ ಪರಿಸ್ಥಿತಿ : ಜುಲೈ 26 ರಂದು ಜಿಲ್ಲಾಡಳಿತದೊಂದಿಗೆ ಸಿಎಂ ವಿಡಿಯೋ ಸಂವಾದ - ಮಳೆಗೆ ಜನಜೀವನ ಅಸ್ತವ್ಯಸ್ತ

ರಾಜ್ಯದಲ್ಲಿ ಮಳೆ ಮತ್ತು ಬೆಳೆ ಪರಿಸ್ಥಿತಿ ಕುರಿತು ಜುಲೈ 26 ರಂದು ಜಿಲ್ಲಾಡಳಿತದೊಂದಿಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಲಿದ್ದಾರೆ.

CM video conference with district administration  CM video conference July 26 over rain issue  CM Siddaramaiah video conference  ರಾಜ್ಯದಲ್ಲಿ ಮಳೆ ಬೆಳೆ ಪರಿಸ್ಥಿತಿ  ಜಿಲ್ಲಾಡಳಿತದೊಂದಿಗೆ ಸಿಎಂ ವಿಡಿಯೋ ಸಂವಾದ  ರಾಜ್ಯದಲ್ಲಿನ ಹವಮಾನ ಮತ್ತು ಮಳೆ  ಮಳೆ ಮತ್ತು ಬೆಳೆ ಪರಿಸ್ಥಿತಿ ಕುರಿತು  ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ  ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ  ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆ  ಮಳೆಗೆ ಜನಜೀವನ ಅಸ್ತವ್ಯಸ್ತ  ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆರ್ಭಟ
ಜುಲೈ 26 ರಂದು ಜಿಲ್ಲಾಡಳಿತದೊಂದಿಗೆ ಸಿಎಂ ವಿಡಿಯೋ ಸಂವಾದ

By

Published : Jul 24, 2023, 9:27 PM IST

ಬೆಂಗಳೂರು:ರಾಜ್ಯದಲ್ಲಿನ ಹವಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ತಿಂಗಳ 26 ರಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಹೆಚ್ಚಾಗಿ ಮಳೆ ಬೀಳುವ ಪ್ರದೇಶಗಳು ಮತ್ತು ಮಳೆ ಇಲ್ಲದೇ ಬರಗಾಲದ ಪರಿಸ್ಥಿತಿ ಇರುವ ಜಿಲ್ಲೆಗಳೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಪರಿಹಾರದ ಕ್ರಮಗಳನ್ನು ಕೈಗೊಳ್ಳಲಿದ್ದಾರೆ.

ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು, ಕಂದಾಯ ಸಚಿವರು, ಕೃಷಿ ಸಚಿವರು ಸೇರಿದಂತೆ ಹಿರಿಯ ಸಚಿವರುಗಳು ಭಾಗಿಯಾಗಲಿದ್ದಾರೆ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ.

ಕರಾವಳಿಯ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ಸ್ಥಳೀಯ ಜಿಲ್ಲಾಡಳಿತ ರಜೆಯನ್ನ ಸಹ ಘೋಷಣೆ ಮಾಡಿದೆ. ಈ ಎಲ್ಲ ಪರಿಸ್ಥಿತಿಗಳ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಅವಲೋಕನ ಮಾಡಲಿದ್ದಾರೆ.

ಓದಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: 50ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್

ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆ ಸೇರಿದಂತೆ ಜೇವರ್ಗಿ ತಾಲೂಕಿನ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜೇವರ್ಗಿ ತಾಲೂಕಿನಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಕೂಡ ಭಾರಿ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು, ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಯಿತು. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಭೀಕರ ಮಳೆ ಸುರಿಯುತ್ತಿದ್ದರೂ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ.

25ಕ್ಕೆ ಶಾಲಾ-ಕಾಲೇಜು ರಜೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ ( ಜುಲೈ 25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.24 ರಿಂದ 25 ರವರೆಗೆ ರೆಡ್ ಅಲರ್ಟ್ ಯೋಜನೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ನಿರ್ಣಯ ತೆಗೆದುಕೊಂಡಿದೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆರ್ಭಟ:ಜಿಲ್ಲೆಯಲ್ಲಿ ಕಳೆದ ಕೆಲ‌ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಅದರಲ್ಲಿಯೂ ಗಂಗಾವಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಮನೆಗಳಿಗೆ ನೀರು ನುಗ್ಗಲಾರಂಭಿಸಿದೆ. ಗಂಗಾವಳಿ ಸಮೀಪವೇ ಇರುವ ಬಿಳಿಹೊಯ್ಗೆಯಲ್ಲಿ ರಸ್ತೆ ಸಂಪೂರ್ಣ ಮುಳುಗಡೆಯಾಗಿದ್ದು, ಸುಮಾರು 20 ಕ್ಕೂ ಹೆಚ್ಚು ಮನೆಗಳ ಅಂಗಳಕ್ಕೆ ನೀರು ನುಗ್ಗಿರುವುದು ವರದಿಯಾಗಿದೆ.

ABOUT THE AUTHOR

...view details