ಬೆಂಗಳೂರು: ನೀರಾವರಿ ಯೋಜನೆಗಳು, ಮಳೆ ಪರಿಸ್ಥಿತಿ, ಕೋವಿಡ್-19 ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಸಚಿವರು, ಅಧಿಕಾರಿಗಳ ಜೊತೆ ಸಿಎಂ ಮಹತ್ವದ ವಿಡಿಯೋ ಸಂವಾದ - Cm video conversation news
ಕೊರೊನಾ ವೈರಸ್, ಮಳೆ ಪರಿಸ್ಥಿತಿ ಮತ್ತು ನೀರಾವರಿ ಯೋಜನೆ ವಿಷಯಗಳಿಗೆ ಸಂಬಂಧಿಸಿದಂತೆ ಹಾಗೂ ಇನ್ನಿತರ ವಸ್ತುಸ್ಥಿತಿಗಳ ಬಗ್ಗೆಯೂ ಸಿಎಂ ಎಲ್ಲ ಜಿಲ್ಲಾಧಿಕಾರಿಗಳು, ಎಸ್ಪಿಗಳು ಹಾಗೂ ಸಚಿವರ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಸಿಇಒ, ಪೊಲೀಸ್ ವರಿಷ್ಠಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಪ್ರಸ್ತುತ ಸ್ಥಿತಿಗತಿ ಕುರಿತು ತಿಳಿದುಕೊಳ್ಳಲು ಸಿಎಂ ವಿಡಿಯೋ ಸಂವಾದ ನಡೆಸಲಿದ್ದಾರೆ.
ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಕಲಬುರಗಿ, ಮಂಗಳೂರು, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ರಾಯಚೂರು ಹಾಗೂ ಗದಗ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಕೊರೊನಾ ವೈರಸ್, ಮಳೆ ಪರಿಸ್ಥಿತಿ ಮತ್ತು ನೀರಾವರಿ ಯೋಜನೆ ವಿಷಯಗಳಿಗೆ ಸಂಬಂಧಿಸಿದಂತೆ ಇನ್ನಿತರ ವಸ್ತುಸ್ಥಿತಿಗಳ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.