ಬೆಂಗಳೂರು: ಅಮೆರಿಕದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿ ಧೈರ್ಯ ತುಂಬಿದರು.
ಅಮೆರಿಕಾದಲ್ಲಿನ ಕನ್ನಡಿಗರ ಜೊತೆ ಸಿಎಂ ವೀಡಿಯೋ ಸಂವಾದ ಉತ್ತರ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರನ್ನುದ್ದೇಶಿಸಿ ಜೂಮ್ ವಿಡಿಯೋ ಕಾನ್ಫರೆನ್ಸ್ ಕಾಲ್ ಮೂಲಕ ಮಾತನಾಡಿದ ಸಿಎಂ, ಉತ್ತರ ಅಮೆರಿಕದಲ್ಲಿ ಕೊರೊನಾದಿಂದ ಕನ್ನಡಿಗರ ಪರಿಸ್ಥಿತಿ ಹೇಗಿದೆ ಎನ್ನುವ ಕುರಿತು ವಿಚಾರಿಸಿದರು.
ಸ್ಥಳೀಯ ಮಟ್ಟದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು, ಮನೆಯಿಂದ ಹೊರ ಬಾರದೇ ಕೊರೊನಾ ಸೋಂಕಿನಿಂದ ಮುಕ್ತರಾಗಿರಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಮೆರಿಕದಲ್ಲಿನ ಕನ್ನಡಿಗರಿಗೆ ಸಿಎಂ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಹಾಗೂ ಜೂಮ್ ಆಫ್ ಮುಖಾಂತರ ಮೈಸೂರಿನಿಂದ ಸುತ್ತೂರು ಸಂಸ್ಥಾನದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಅಕ್ಕ ಒಕ್ಕೂಟದ ಅಧ್ಯಕ್ಷ ಅಮರನಾಥಗೌಡ ಹಾಗೂ ಒಕ್ಕೂಟದ ಪದಾಧಿಕಾರಿಗಳಾದ ತುಮಕೂರು ದಯಾನಂದ್, ವಿನೋದ್ ಮತ್ತು ಪ್ರಭುದೇವ ಉಪಸ್ಥಿತರಿದ್ದರು.