ಬೆಂಗಳೂರು: ನವೆಂಬರ್ 11 ರಂದು ನಾಡಪ್ರಭು ಕೆಂಪೇಗೌಡ ಪುತ್ಥಳಿ ಅನಾವರಣ ಕಾರ್ಯಕ್ರಮ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಿಂದ ಬೆಳಗ್ಗೆ 11 ಗಂಟೆಗೆ ವಿಡಿಯೋ ಸಂವಾದದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಗೆ ಕಾರ್ಯಕ್ರಮದ ಸಿದ್ದತೆ ಕುರಿತ ವಿವರ ನೀಡಲಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಿರ್ಮಾಣಗೊಂಡಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಿ ಮೋದಿ ಅನಾವರಣ ಮಾಡಲಿದ್ದಾರೆ.