ಬೆಂಗಳೂರು: ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ಬೇಡ ಜಂಗಮರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವದಿ ಹೋರಾಟ ನಡೆಸುತ್ತಿರುವ ನಡುವೆ ಸಮುದಾಯದ ಪ್ರಮುಖ ಶ್ರೀಗಳಾದ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರುಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದಾರೆ.
ನಗರದ ಜೆ.ಪಿ.ನಗರದ ಶ್ರೀ ಸೋಮೇಶ್ವರ ಸಭಾ ಭವನದಲ್ಲಿ ವಾಸ್ತವ್ಯ ಹೂಡಿರುವ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶ್ರೀಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು. ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. ನಂತರ ಕೆಲಕಾಲ ಮಾತುಕತೆ ನಡೆಸಿದರು.