ಬೆಂಗಳೂರು: ಇಂದಿನಿಂದ ಆರಂಭವಾಗಿರುವ ಜೆಇಇ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಕೋರಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬಗ್ಗೆ ಗಮನ ಹರಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದು ಯಶಸ್ಸು ಪಡೆಯುರಿ ಎಂದು ಸಿಎಂ ಶುಭ ಹಾರೈಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ
ಜೆಇಇ ಮುಖ್ಯ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಂ ಕೂಡ ಶುಭ ಕೋರಿದ್ದಾರೆ. ಬೇರೆ ವಿಷಯಗಳ ಬಗ್ಗೆ ಗಮನ ಹರಿಸದೆ ಪರೀಕ್ಷೆಯೆಡೆಗೆ ಮಾತ್ರ ಗಮನ ಕೇಂದ್ರೀಕರಿಸಿ, ನಿಮಗೆಲ್ಲಾ ಯಶಸ್ಸು ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್
ಸುರಕ್ಷತಾ ರೀತಿಯಲ್ಲಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಇಂದಿನಿಂದ ಆರಂಭಗೊಳ್ಳುತ್ತಿರುವ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿರುವ ಸಚಿವರು, ಯಾವುದೇ ರೀತಿಯ ಆತಂಕವಿಲ್ಲದೆ ಪರೀಕ್ಷೆ ಎದುರಿಸಿ, ಉತ್ತಮ ಫಲಿತಾಂಶ ಪಡೆಯುವಂತೆ ಶುಭ ಕೋರಿದ್ದಾರೆ.