ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಎಸ್.ಎಂ ಕೃಷ್ಣ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬದ ಶುಭ ಕೋರಿದ್ದಾರೆ.
ಎಸ್.ಎಂ ಕೃಷ್ಣ, ರಮೇಶ್ ಜಾರಕಿಹೊಳಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ...! - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟ್
ಸಿಎಂ ಬಿಎಸ್ವೈ ಅವರು ಬಿಜೆಪಿ ಹಿರಿಯ ನಾಯಕ ಎಸ್.ಎಂ ಕೃಷ್ಣ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಟ್ವಿಟ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಭಾರತ ಕಂಡ ಅತ್ಯುತ್ತಮ ರಾಜಕೀಯ ಮುತ್ಸದ್ದಿಗಳ ಪೈಕಿ ಎಸ್.ಎಂ ಕೃಷ್ಣ ಕೂಡ ಒಬ್ಬರು. ಬೆಂಗಳೂರಿಗೆ ಸಿಲಿಕಾನ್ ಸಿಟಿ ಎಂಬ ಪ್ರಸಿದ್ಧಿ ಬರಲು ಅವರ ಕೊಡುಗೆ ಅಪಾರ. ರಾಜ್ಯದ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ. ಅವರ ಹುಟ್ಟುಹಬ್ಬದ ದಿನವಾದ ಇಂದು ಎಸ್. ಎಂ ಕೃಷ್ಣರಿಗೆ ಹೃದಯಪೂರ್ವಕ ಶುಭಾಶಯಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಸಂಪುಟ ಸಹೋದ್ಯೋಗಿ, ನೀರಾವರಿ ಸಚಿವ ರಮೇಶ್ ಜಾರಕಿ ಹೊಳಿ ಅವರಿಗೂ ಹುಟ್ಟು ಹಬ್ಬದ ಶುಭಾಶಯಗಳು.ದೇವರು ಅವರಿಗೆ ಹೆಚ್ಚಿನ ಆಯುರಾರೋಗ್ಯ ನೀಡಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.