ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ರೆಬಲ್ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮನವೊಲಿಕೆ ಕುರಿತು ಸಚಿವರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದರು.
ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಶರಣು ಸಲಗರ್ ನಾಮಪತ್ರ ಸಲ್ಲಿಸಿದ್ದು, ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ, ಈ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾ ಜವಾಬ್ದಾರಿ ಹೊತ್ತಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಅಧಿಕೃತ ನಿವಾಸ ಕಾವೇರಿಗೆ ಕರೆಸಿಕೊಂಡು ಸಿಎಂ ಯಡಿಯೂರಪ್ಪ ಚರ್ಚೆ ನಡೆಸಿದರು.
ಮೂರೂ ಕ್ಷೇತ್ರದ ಉಪ ಚುನಾವಣೆಯನ್ನು ಗೆಲ್ಲಲೇಬೇಕು, ಬಂಡಾಯ ಅಭ್ಯರ್ಥಿ ಕಾರಣದಿಂದ ನಮಗೆ ಹಿನ್ನಡೆಯಾಗಬಾರದು ಹಾಗಾಗಿ ಕೂಡಲೇ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಮನವೊಲಿಕೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.