ಬೆಂಗಳೂರು:ರಾಜ್ಯದಲ್ಲಿ ದಿನೇ ದಿನೆ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಎಂ ಯಡಿಯೂರಪ್ಪ, ಸಚಿವರು ಹಾಗೂ ವಲಯ ಉಸ್ತುವಾರಿಗಳ ಸಭೆ ಕರೆದಿದ್ದಾರೆ.
ನಾಳೆ ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಹೆಚ್ಚುತ್ತಿರುವ ಸೊಂಕಿನ ಪ್ರಮಾಣ ತಡೆಯುವ ಸಂಬಂಧ ಚರ್ಚೆ ನಡೆಸಲಿದ್ದಾರೆ. ನಾಳೆಯ ಸಭೆಯಲ್ಲಿ ಸರ್ಕಾರ ಮುಂದೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಮತ್ತಷ್ಟು ಟಫ್ ರೂಲ್ಸ್ ಮಾಡುವ ಸಂಬಂಧ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.