ಕರ್ನಾಟಕ

karnataka

ETV Bharat / state

ಅ.21 ರಂದು ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ - CM tour on Uttara Karnataka

ಈ ಬಾರಿ ಸುರಿದ ಭಾರಿ ಮಳೆಗೆ ಉತ್ತರ ಕರ್ನಾಟಕದ ಜಿಲ್ಲೆಗಳು ತತ್ತರಗೊಂಡಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಅ .21 ರಂದು ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

Yadiyurappa
Yadiyurappa

By

Published : Oct 19, 2020, 6:46 PM IST

ಬೆಂಗಳೂರು: ಅ.21 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಅ. 21 ರಂದು ಬೆಳಗ್ಗೆ 9.15 ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿರುವ ಸಿಎಂ, 10.05 ಕ್ಕೆ ಬಳ್ಳಾರಿ ತೋರಣಗಲ್ಲಿನಲ್ಲಿರುವ ಜಿಂದಾಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.10.15 ಕ್ಕೆ ಭಾರತೀಯ ವಾಯುಪಡೆ ಹೆಲಿಕ್ಯಾಪ್ಟರ್ ಮೂಲಕ ಬಳ್ಳಾರಿ, ರಾಯಚೂರು ಭಾಗದ ನೆರೆ ಹಾನಿ ಪ್ರದೇಶಗಳ ವೈಮಾನಿಕ ಸಮಿಕ್ಷೆ ನಡೆಸಲಿದ್ದಾರೆ.

ಬೆಳಗ್ಗೆ11.45 ಕ್ಕೆ ಕಲಬುರಗಿಯಲ್ಲಿ ಕಲಬುರಗಿ ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದು, ಮಧ್ಯಾಹ್ನ 12.45 ಕ್ಕೆ ವೈಮಾನಿಕ ಎರಡೂ ಜಿಲ್ಲಾ ವ್ಯಾಪ್ತಿಯ ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 2.50 ಆಲಮಟ್ಟಿಯಲ್ಲಿ ವಿಜಯಪುರ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತ ಸಭೆ ನಡೆಸಿ 3.30 ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಸಂಜೆ 4.30 ಕ್ಕೆ ಬಳ್ಳಾರಿಗೆ ವಾಪಸ್ ಆಗಲಿರುವ ಸಿಎಂ ಯಡಿಯೂರಪ್ಪ 4.45 ಕ್ಕೆ ವಿಶೇಷ ವಿಮಾನದ ಮೂಲಕ ಹೊರಟು 5.30 ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

ABOUT THE AUTHOR

...view details