ಕರ್ನಾಟಕ

karnataka

ETV Bharat / state

ಜವಾಬ್ದಾರಿ ಅನುಸಾರ ಕೆಲಸ ಮಾಡಿ ; ಸಚಿವರಿಗೆ ಸಿಎಂ ಯಡಿಯೂರಪ್ಪ ಸೂಚನೆ - ಸಚಿವರ ಜೊತೆ ಸಿಎಂ ಯಡಿಯೂರಪ್ಪ ಸಭೆ

3ನೇ‌ ಅಲೆಗೆ ಈವಾಗಿನಿಂದಲೇ ಸಿದ್ದರಾಗಬೇಕಿದೆ. ಅದಕ್ಕೊಂದು‌ ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ಸೂಚಿಸಿದ ಸಿಎಂ, ಶಾಸಕರು ಹಾಗೂ ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿ‌ ಜಿಲ್ಲೆಗಳ ಕೊರೊನಾ ಪರಿಸ್ಥಿತಿ ಹತೋಟಿಗೆ ತರಲು‌ ಶ್ರಮಿಸಬೇಕು..

yadiyurappa
yadiyurappa

By

Published : May 10, 2021, 8:16 PM IST

ಬೆಂಗಳೂರು : ಕೋವಿಡ್ -19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

ಮುಖ್ಯಮಂತ್ರಿಗಳು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್ -19 ನಿಯಂತ್ರಣದ ಕುರಿತು ಚರ್ಚೆ ನಡೆಸಿದರು. ಪ್ರಮುಖವಾಗಿ ಕಟ್ಟುನಿಟ್ಟಿನ ರೂಲ್ಸ್‌ಗಳನ್ನು ಜಾರಿಗೆ ತಂದಿದ್ದು, ಜನರು ಅನಗತ್ಯವಾಗಿ ಓಡಾಡುವುದನ್ನು‌ ತಪ್ಪಿಸಬೇಕು.

ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸುವುದು ಮತ್ತು ರೆಮಿಡಿಸಿವಿರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚಿಸಿದರು.

ಖಾಸಗಿ ಆಸ್ಪತ್ರೆಗಳ ಬೆಡ್​ಗಳ ಬಗ್ಗೆ ನಿಗಾ ಇಡಬೇಕು. ಅಲ್ಲದೆ ಆಕ್ಸಿಜನ್, ರೆಮಿಡಿಸಿವಿರ್ ಹಾಗೂ ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಿದರು.

ವಾರ್ ರೂಮ್‌ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು. ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳಿಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಹಾಕಲು ಈಗಿನಿಂದಲೇ ಕೆಲಸ ಶುರು ಮಾಡಲು ಸೂಚಿಸಿದರು.

3ನೇ‌ ಅಲೆಗೆ ಈವಾಗಿನಿಂದಲೇ ಸಿದ್ದರಾಗಬೇಕಿದೆ. ಅದಕ್ಕೊಂದು‌ ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ಸೂಚಿಸಿದ ಸಿಎಂ, ಶಾಸಕರು ಹಾಗೂ ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿ‌ ಜಿಲ್ಲೆಗಳ ಕೊರೊನಾ ಪರಿಸ್ಥಿತಿ ಹತೋಟಿಗೆ ತರಲು‌ ಶ್ರಮಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ್‌ ನಾರಾಯಣ್, ಸಚಿವರಾದ ಅರವಿಂದ ಲಿಂಬಾವಳಿ, ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಗುಪ್ತದಳ ಎಡಿಜಿಪಿ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ABOUT THE AUTHOR

...view details