ಕರ್ನಾಟಕ

karnataka

ETV Bharat / state

ಪರಿಷತ್ ಸದಸ್ಯರ ಕಡೆಗಣನೆ ಆರೋಪ; ಎಂಎಲ್​ಸಿಗಳ ಸಭೆ ನಡೆಸಿದ ಸಿಎಂ - ವಿಧಾನ ಪರಿಷತ್ ಸದಸ್ಯರ ಸಮಸ್ಯೆ ಆಲಿಸಿದ ಯಡಿಯೂರಪ್ಪ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದರು.

cm yadiyurappa meeting with MLCs
ಎಂಎಲ್​ಸಿಗಳ ಸಭೆ ನಡೆಸಿದ ಸಿಎಂ

By

Published : Sep 27, 2020, 6:15 PM IST

ಬೆಂಗಳೂರು: ವಿಧಾನ ಪರಿಷತ್ ಸದಸ್ಯರನ್ನು ಮುಖ್ಯಮಂತ್ರಿಗಳು ಕಡೆಗಣಿಸಿದ್ದಾರೆ ಎನ್ನುವ ಅಸಮಧಾನ ಆಂತರಿಕವಾಗಿ ವ್ಯಕ್ತವಾದ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದಾರೆ.

ಎಂಎಲ್​ಸಿಗಳ ಸಭೆ ನಡೆಸಿದ ಸಿಎಂ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರೊಂದಿಗೆ ಸಿಎಂ ಸಭೆ ನಡೆಸಿದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಪರಿಷತ್ ಸದಸ್ಯರ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ವಿಧಾನಪರಿಷತ್‌ ನಲ್ಲಿ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ವಿಧೇಯಕಗಳು ಅಂಗೀಕಾರವಾಗದ ಹಿನ್ನೆಲೆಯಲ್ಲಿ ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ ಕಾರ್ಮಿಕ ಇಲಾಖೆಗೆ ಸೇರಿದ ಕಾಯ್ದೆಗೆ ಸೋಲಾದ ಬಗ್ಗೆಯೂ ಚರ್ಚೆ ನಡೆಸಿದರು.ಕಲಾಪದಲ್ಲಿ ನಡೆದ ವಿಚಾರಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ ಸಿಎಂ ಎರಡು ದಿನದ ಹಿಂದೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಪರಿಷತ್‌ ಸದಸ್ಯರನ್ನು ಸರಿಯಾಗಿ ಗಮನಿಸಿಕೊಳ್ಳಲಾಗಲಿಲ್ಲದ ವಿವರಣೆಯೊಂದಿಗೆ ಪರಿಷತ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದರು.ಸಭೆಯಲ್ಲಿ ಪರಿಷತ್ತಿನ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಎಂಟಿಬಿ ನಾಗರಾಜ್, ರವಿಕುಮಾರ್, ಭಾರತಿ ಶೆಟ್ಟಿ, ವೈ.ಎ ನಾರಾಯಣ ಸ್ವಾಮಿ, ಆಯನೂರು ಮಂಜುನಾಥ್, ರುದ್ರೇಗೌಡ, ರಘುನಾಥ್ ರಾವ್ ಮಲ್ಕಾಪುರೆ, ಹನುಮಂತ ನಿರಾಣಿ, ಆರ್.ಶಂಕರ್ ಸೇರಿ ಹಲವರು ಭಾಗಿಯಾಗಿದ್ದರು.ಸಚಿವ ಈಶ್ವರಪ್ಪ ನಿವಾಸದಲ್ಲಿ ನಡೆದ ಕುರುಬ ಸಮುದಾಯದ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರಣ ಹೆಚ್.ವಿಶ್ವನಾಥ್ ಸಿಎಂ ಸಭೆಗೆ ಗೈರಾಗಿದ್ದರು.

ABOUT THE AUTHOR

...view details