ಬೆಂಗಳೂರು:ಆಗಸ್ಟ್ 6ರಂದು ದೆಹಲಿಯಲ್ಲಿ ನಮ್ಮೆಲ್ಲ ಸಂಸದರನ್ನು ಭೇಟಿ ಮಾಡುತ್ತೇನೆ. ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನದ ಬಿಡುಗಡೆ ಬಗ್ಗೆ ಚರ್ಚಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಆಗಸ್ಟ್ 5ರಿಂದ 8ರವರಗೆ ದೆಹಲಿಯಲ್ಲೇ ಇದ್ದು, ಪಕ್ಷದ ಎಲ್ಲ ಪ್ರಮುಖರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.
ಕೆಆರ್ಎಸ್, ಮಲೆನಾಡು ಭಾಗದಲ್ಲಿ ಮೋಡ ಬಿತ್ತನೆಗೆ ಸೂಚಿಸಿದ್ದೇನೆ. ನಿನ್ನೆ ಡಿಸಿ, ಸಿಇಒಗಳ ಸಭೆ ಮಾಡಿ, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸೂಚಿಸಿರುವೆ ಎಂದು ತಿಳಿಸಿದರು.
ಆಗಸ್ಟ್ 11ರವರೆಗೆ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಈ ಬಾರಿ 50ಲಕ್ಷ ಹೊಸ ಸದಸ್ಯತ್ವದ ಗುರಿ ಹೊಂದಲಾಗಿದೆ. ಕಳೆದ ಬಾರಿ 80 ಲಕ್ಷ ಮಂದಿ ಬಿಜೆಪಿ ಸದಸ್ಯರಾಗಿದ್ದರು. ಆಗಸ್ಟ್ 10 ಮತ್ತು 11 ರಂದು ನಮ್ಮ ಶಾಸಕರು ಹಾಗೂ ಪಕ್ಷದ ಎಲ್ಲ ಪದಾಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಾರೆ. ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧರಾಗಬೇಕಾಗಿದೆ ಎಂದು ತಿಳಿಸಿದರು.