ಕರ್ನಾಟಕ

karnataka

ETV Bharat / state

ಪಕ್ಷದ ನಾಯಕರ, ಕಾರ್ಯಕರ್ತರ ಪ್ರಯತ್ನ ಸ್ಮರಿಸಿ ಐತಿಹಾಸಿಕ ಕ್ಷಣ ಸಂಭ್ರಮಿಸಿ: ಸಿಎಂ ಕರೆ - Ayodya Bhumi pooja

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ ಅನೇಕ ಕಾರ್ಯಕರ್ತರು, ಪಕ್ಷದ ನಾಯಕರು ಸಾಕಷ್ಟು ಹೋರಾಟ ಮಾಡಿದ್ದಾರೆ. ಆ ಕ್ಷಣಗಳನ್ನು ಸ್ಮರಿಸುತ್ತಾ ಐತಿಹಾಸಿಕ ಕ್ಷಣವನ್ನು ಸ್ವಾಗತಿಸೋಣ ಎಂದು ಸಿಎಂ ಕರೆ ನೀಡಿದ್ದಾರೆ.

ಯಡಿಯೂರಪ್ಪ
ಯಡಿಯೂರಪ್ಪ

By

Published : Aug 5, 2020, 11:03 AM IST

ಬೆಂಗಳೂರು:ರಾಮಮಂದಿರ ನಿರ್ಮಾಣಕ್ಕಾಗಿ ಜನಾಂದೋಲನಗಳಲ್ಲಿ ಪಾಲ್ಗೊಂಡು ಅನೇಕ ರೀತಿಯ ಸವಾಲುಗಳನ್ನು ಎದುರಿಸಿ ಹೋರಾಟಗಳನ್ನು ಮಾಡಿದ ಪಕ್ಷದ ನಾಯಕರು, ಕಾರ್ಯಕರ್ತರ ಪ್ರಯತ್ನಗಳನ್ನು ಸ್ಮರಿಸುತ್ತ ಹೆಮ್ಮೆಯ ಐತಿಹಾಸಿಕ ಕ್ಷಣವನ್ನು ಸ್ವಾಗತಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಶತಮಾನಗಳ ನಂತರ ಮತ್ತೆ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನನ್ವಯ ಭಾರತೀಯರ ಪರಮಪವಿತ್ರ ಶ್ರದ್ಧಾಕೇಂದ್ರ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಅಗಣಿತ ಸಾಧು -ಸಂತರ, ಶ್ರದ್ಧಾಳುಗಳ ತಪಸ್ಸು, ಪರಿಶ್ರಮ, ಬಲಿದಾನ ಪ್ರಾರ್ಥನೆಗಳು ಸಾಕಾರಗೊಳ್ಳುವ ಸಮಯ ಬಂದಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details