ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿಕೆ ಮಾಡುತ್ತಿದ್ದಂತೆ ಗೃಹ ಕಚೇರಿಯಿಂದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಿದರು.
ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ: ಕೃಷ್ಣಾದಿಂದ ಧವಳಗಿರಿಗೆ ತೆರಳಿದ ಸಿಎಂ - CM Yadiyurappa related news
ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಹಿನ್ನೆಲೆ ಗೃಹ ಕಚೇರಿ ಕೃಷ್ಣಾಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿದರು. ಅರ್ಜಿ ವಿಚಾರಣೆ ಮುಂದೂಡಿಕೆಯಾಗುತ್ತಿದ್ದಂತೆ ಬಿಎಸ್ವೈ ಹಾಗೂ ಎಸ್.ಆರ್.ವಿಶ್ವನಾಥ್ ಗೃಹ ಕಚೇರಿ ಕೃಷ್ಣಾದಿಂದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ತೆರಳಿದರು.
ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಹಿನ್ನೆಲೆ ಗೃಹ ಕಚೇರಿ ಕೃಷ್ಣಾಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿದರು. ಅನರ್ಹ ಶಾಸಕರ ಅರ್ಜಿ ವಿಚಾರಣೆ ಕುರಿತು ಸಿಎಂ ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದರು. ಅರ್ಜಿ ವಿಚಾರಣೆ ಮುಂದೂಡಿಕೆಯಾಗುತ್ತಿದ್ದಂತೆ ಬಿಎಸ್ವೈ ಹಾಗೂ ಎಸ್.ಆರ್.ವಿಶ್ವನಾಥ್ ಗೃಹ ಕಚೇರಿ ಕೃಷ್ಣಾದಿಂದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ತೆರಳಿದರು.
ಅನರ್ಹ ಶಾಸಕರನ್ನು ಸಮಾಧಾನಪಡಿಸುವ ಕೆಲಸ ಮತ್ತು ಕಾನೂನು ರಕ್ಷಣೆ ಕೊಡಿಸುವ ಭರವಸೆ ನೀಡುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.