ಕರ್ನಾಟಕ

karnataka

ETV Bharat / state

ದೊಡ್ಡ ಗೌಡರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಬಿಎಸ್​ವೈ - CM

ಇಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗು ಸಂಪುಟ ಸಹೋದ್ಯೋಗಿಗಳು ಅವರಿಗೆ ಶುಭಕೋರಿ ಟ್ವೀಟ್​ ಮಾಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಶುಭ ಕೋರಿದ ಸಿಎಂ ಬಿಎಸ್​ವೈ
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಶುಭ ಕೋರಿದ ಸಿಎಂ ಬಿಎಸ್​ವೈ

By

Published : May 18, 2020, 10:31 AM IST

ಬೆಂಗಳೂರು:ಮಾಜಿ ಪ್ರಧಾನಿ ಹಾಗು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗು ಸಂಪುಟ ಸಹೋದ್ಯೋಗಿಗಳು ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಭಾರತದ ಪ್ರಧಾನಮಂತ್ರಿಗಳಾಗಿ, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಮಹತ್ವದ ಸೇವೆ ಸಲ್ಲಿಸಿರುವ, ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕೀಯ ಮುತ್ಸದ್ಧಿ ಹೆಚ್.ಡಿ ದೇವೇಗೌಡರವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ದೇವರ ಅನುಗ್ರಹ ತಮ್ಮ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

ಹಿರಿಯ ಮುತ್ಸದ್ಧಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮ್ಮ ಆಯುರಾರೋಗ್ಯವನ್ನು ಚೆನ್ನಾಗಿಡಲಿ. ರಾಜ್ಯಕ್ಕೆ, ದೇಶಕ್ಕೆ ಸುದೀರ್ಘವಾಗಿ ನಿಮ್ಮ ಜನಸೇವೆ, ಮಾರ್ಗದರ್ಶನ ದೊರೆಯುವಂತಾಗಲಿ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

ದೇಶದ ಹಿರಿಯ ರಾಜಕೀಯ ಮುತ್ಸದ್ಧಿಗಳು, ರಾಜ್ಯದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ದೇಶದ ಮಾಜಿ ಪ್ರಧಾನಿಗಳಾದ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಆಯುಷ್ಯ ನೀಡಲಿ ಎಂದು ಹಾರೈಸುತ್ತೇನೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ಹಿರಿಯ ರಾಜಕೀಯ ಧುರೀಣರು, ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯವನ್ನು, ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details