ಕರ್ನಾಟಕ

karnataka

ETV Bharat / state

ಕೊರೊನಾ ಸಂಕಷ್ಟ: ಶುಕ್ರವಾರ ಬೆಂಗಳೂರು ಜನಪ್ರತಿನಿಧಿಗಳ ಸಭೆ ಕರೆದ ಸಿಎಂ - All-party meeting

ಬೆಂಗಳೂರಲ್ಲಿ ಕಳೆದೊಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಈ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ವ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊರೊನಾ ನಿಯಂತ್ರಣ ಕುರಿತಂತೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

CM Yeddyurappa calls all Minister meeting for corona discussion
ರಾಜಧಾನಿಯಲ್ಲಿ ಮಿತಿ ಮೀರಿದ ಕೊರೊನಾ: ಶುಕ್ರವಾರ ಬೆಂಗಳೂರು ಜನಪ್ರತಿನಿಧಿಗಳ ಸಭೆ ಕರೆದ ಸಿಎಂ

By

Published : Jul 8, 2020, 11:23 PM IST

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಪಾಸಿಟಿವ್ ನಿಯಂತ್ರಣ ಕುರಿತು ಶುಕ್ರವಾರ ಬೆಂಗಳೂರು ಜನಪ್ರತಿನಿಧಿಗಳ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕರೆದಿದ್ದಾರೆ.

ಲಾಕ್​​ಡೌನ್ ಹೊರತು ಬೇರೆ ಮಾರ್ಗಗಳ ಕುರಿತು‌ ಚರ್ಚಿಸಲು ಆಹ್ವಾನ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿರುವ ವೈಟ್ ಪೆಟಲ್ಸ್​ನಲ್ಲಿ ಸಭೆ ಕರೆಯಲಾಗಿದ್ದು, ಬೆಂಗಳೂರಿನ ಸಚಿವರು, ಶಾಸಕರು, ಸಂಸದರು, ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಬಿಬಿಎಂಪಿ ಸದಸ್ಯರನ್ನು ಆಹ್ವಾನಿಸಲಾಗಿದೆ.

ಪ್ರತಿ ವಾರ್ಡ್ ಮಟ್ಟದಿಂದಲೂ ಕೊರೊನಾ ನಿಯಂತ್ರಣ ಆಗಬೇಕಿರುವ ಹಿನ್ನೆಲೆಯಲ್ಲಿ ಸಂಸದರಿಂದ ಪಾಲಿಕೆ ಸದಸ್ಯರವರೆಗೆ ಎಲ್ಲಾ ಜನಪ್ರತಿನಿಧಿಗಳನ್ನು ಸಿಎಂ ಸಭೆಗೆ ಆಗಮಿಸುವಂತೆ ಮನವಿ ಮಾಡಿದ್ದಾರೆ.

ಲಾಕ್​​ಡೌನ್ ಜಾರಿ ಹೊರತುಪಡಿಸಿ ಬೆಂಗಳೂರಿನಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎನ್ನುವ ಕುರಿತು ಸಭೆಯಲ್ಲಿ ಜನಪ್ರತಿನಿಧಿಗಳ ಸಲಹೆಯನ್ನು ಸಿಎಂ ಪಡೆಯಲಿದ್ದಾರೆ. ಈಗಾಗಲೇ ಪ್ರತಿ ಭಾನುವಾರ ಲಾಕ್​ಡೌನ್ ಜಾರಿ ಮಾಡಲಾಗಿದೆ, ಕೇಂದ್ರದ ಸೂಚನೆಯಂತೆ ಕಂಟೇನ್ಮೆಂಟ್​​ ಝೋನ್​​​ನಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು ಇದನ್ನು ಬಿಟ್ಟು ಮತ್ತಿನ್ನೇನು ಕ್ರಮ ಕೈಗೊಳ್ಳಬಹುದು ಎನ್ನುವ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ.

ABOUT THE AUTHOR

...view details