ಬೆಂಗಳೂರು: ಮೈತ್ರಿ ಸರ್ಕಾರ ಬಿಬಿಎಂಪಿ ಬಜೆಟ್‌ಗೆ ನೀಡಿದ್ದ ಅನುಮೋದನೆಯನ್ನು ಸಿಎಂ ಯಡಿಯೂರಪ್ಪ ತಡೆ ಹಿಡಿದಿದ್ದಾರೆ.
ಬಿಬಿಎಂಪಿ ಬಜೆಟ್ ಅನುಮೋದನೆ ತಡೆ ಹಿಡಿದ ಸಿಎಂ ಯಡಿಯೂರಪ್ಪ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಿಬಿಎಂಪಿ ಬಜೆಟ್‌ಗೆ ನೀಡಿದ್ದ ಅನುಮೋದನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ತಡೆ ಹಿಡಿದಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಸಿಎಂ, ನಗರಾಭಿವೃದ್ಧಿ ಇಲಾಖೆ ಮೇ 22ರಂದು ಬಿಬಿಎಂಪಿಯ 2018-91 ಸಾಲಿನ ಪರಿಷ್ಕೃತ ಆಯವ್ಯಯ ಮತ್ತು 2019-20ನೇ ಸಾಲಿನ ಆಯವ್ಯಯದ ಅಂದಾಜುಗಳಿಗೆ ಅನುಮೋದನೆ ನೀಡಿರುವುದು ಗಮನಕ್ಕೆ ಬಂದಿದೆ. ಈ ಅನುಮೋದನೆಯನ್ನು ಸಚಿವ ಸಂಪುಟದ ಸಮ್ಮತಿ ಇಲ್ಲದೆ ಮಾಡಿರುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆ ಬಿಬಿಎಂಪಿ ಯ ಬಜೆಟ್‌ಗೆ ಸಚಿವ ಸಂಪುಟ ಅನುಮೋದನೆ ಪಡೆದು ಸರ್ಕಾರಿ ಆದೇಶವನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು. ಅಲ್ಲಿವರೆಗೆ ಬಜೆಟ್ ಅನುಷ್ಠಾನಕ್ಕಾಗಿ ಜಾಬ್ ಕೋಡ್ ನೀಡುವುದನ್ನು ಹಾಗೂ ಟೆಂಡರ್ ಕರೆಯುವುದನ್ನು ತಕ್ಷಣದಿಂದ ಸ್ಥಗಿತಗೊಳಿಸಲು ಸಿಎಂ ಸೂಚನೆ ನೀಡಿದ್ದಾರೆ.
ಇದರ ಜತೆಗೆ 2018-19ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆ ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 2018-19, 2019-20 ಮತ್ತು 2020-21 ರ ಆರ್ಥಿಕ ವರ್ಷಗಳಲ್ಲಿ ಅನುಷ್ಠಾನ ಗೊಳಿಸಲು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ.