ಕರ್ನಾಟಕ

karnataka

ETV Bharat / state

ಮಾಜಿ ಸಚಿವ ರೇವಣ್ಣ ಆಪ್ತ ಅಧಿಕಾರಿಗೆ ಬಿಎಸ್​ವೈ ಕೊಟ್ರು ಬಿಗ್​ ಶಾಕ್​ - undefined

ಮೈತ್ರಿ ಸರ್ಕಾರದಲ್ಲಿ ಲೋಕೊಪಯೋಗಿ ಸಚಿವರಾಗಿದ್ದ ಹೆಚ್.ಡಿ ರೇವಣ್ಣ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾರೆಡ್ಡಿಯನ್ನು ನೂತನ ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕೊಪಯೋಗಿ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ವರ್ಗಾಯಿಸಿದ್ದಾರೆ.

ಸಿಎಂ ಯಡಿಯೂರಪ್ಪ

By

Published : Aug 2, 2019, 2:53 AM IST

ಬೆಂಗಳೂರು: ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಹೆಚ್.ಡಿ ರೇವಣ್ಣ ಅವರ ಆಪ್ತ ಅಧಿಕಾರಿ ಎಂದು ಗುರುತಿಸಿಕೊಂಡಿದ್ದ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಹಾಗು ಮುಖ್ಯ ಇಂಜಿನಿಯರ್ ಕೃಷ್ಣಾರೆಡ್ಡಿಗೆ ಸಿಎಂ ಯಡಿಯೂರಪ್ಪ ಬಿಗ್​ ಶಾಕ್​ ನೀಡಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಕೃಷ್ಣಾರೆಡ್ಡಿಯನ್ನು ವರ್ಗಾಯಿಸಿ ಮುಖ್ಯಮಂತ್ರಿ ಆದೇಶಿಸಿದ್ದು, ಅವರ ಜಾಗಕ್ಕೆ ಜಲಸಂಪನ್ಮೂಲ ಇಲಾಖೆ ಮುಖ್ಯ ಇಂಜಿನಿಯರ್ ಗುರುಪ್ರಸಾದ್ ಅವರನ್ನು ನೇಮಕ ಮಾಡಿದ್ದಾರೆ.

ಮಾಜಿ ಸಚಿವ ರೇವಣ್ಣ ಆಪ್ತ ಅಧಿಕಾರಿ ಎತ್ತಂಗಡಿ

ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದು ಸರ್ಕಾರ ಪತನಗೊಳ್ಳಲಿದೆ ಎನ್ನುವ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ನೂರಾರು ಇಂಜಿನಿಯರ್​ಗಳಿಗೆ ಬಡ್ತಿ ಮತ್ತು ಕೊನೇ ಕ್ಷಣದಲ್ಲಿ ಗುತ್ತಿಗೆದಾರರಿಗೆ ಕೋಟ್ಯಂತರ ರೂ. ಬಿಲ್ ಪಾವತಿಸಿದ್ದರ ಬಗ್ಗೆ ಅಂದು ಪ್ರತಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪ ಕಿಡಿಕಾರಿದ್ದರು. ಈ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರ ಪತನಗೊಂಡ ಬೆನ್ನಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೃಷ್ಣಾರೆಡ್ಡಿಯನ್ನು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ಎತ್ತಂಗಡಿ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details