ಕರ್ನಾಟಕ

karnataka

ETV Bharat / state

ಕೋವಿಡ್ ಮಾರ್ಗಸೂಚಿ ಮುಂದುವರೆಸುವ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ - CM Yeddyurappa meeting about corona

ದೇಶದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಜೂನ್ ಅಂತ್ಯದವರೆಗೂ ಕೋವಿಡ್-19 ಮಾರ್ಗಸೂಚಿ ಮುಂದುವರೆಸುವಂತೆ ಎಲ್ಲ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಈ ಆದೇಶದ ಪಾಲನೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಭೆ ನಡೆಸಲಿದ್ದಾರೆ.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ,CM Yeddyurappa meeting about corona guidelines
ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

By

Published : May 28, 2021, 10:08 AM IST

ಬೆಂಗಳೂರು:ಜೂನ್ ಅಂತ್ಯದವರೆಗೂ ಕೋವಿಡ್-19 ಮಾರ್ಗಸೂಚಿಗಳನ್ನು ಮುಂದುವರೆಸಬೇಕು ಎಂದು ಕೇಂದ್ರ ಗೃಹ ಸಚಿವಾಲಯದಿಂದ ಬಂದಿರುವ ಆದೇಶದ ಪಾಲನೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಿದ್ದಾರೆ.

ಸಂಜೆ 6 ಗಂಟೆಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಕೋವಿಡ್ ಉಸ್ತುವಾರಿ ಸಚಿವರು ಹಾಗು ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಡಿಸಿಎಂ ಅಶ್ವತ್ಥ ನಾರಾಯಣ, ಸಚಿವರಾದ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಆರ್.ಅಶೋಕ್, ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಜೂನ್ ಅಂತ್ಯದವರೆಗೂ ಕೋವಿಡ್-19 ಮಾರ್ಗಸೂಚಿ ಮುಂದುವರೆಸುವಂತೆ ಎಲ್ಲ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಈ ಹಿನ್ನಲೆಯಲ್ಲಿ ಇಂದಿನ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ.

ಸದ್ಯ ಲಾಕ್​ಡೌನ್ 3.O ಜಾರಿಯಲ್ಲಿದ್ದು ಜೂನ್ 7 ರವರೆಗೂ ಇದೇ ನಿಯಮ ಅನ್ವಯವಾಗಲಿದೆ. ನಂತರ ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡಬೇಕಾ ಅಥವಾ ಜೂನ್ ಅಂತ್ಯದವರೆಗೂ ಯಾವ ರೀತಿಯ ಕಠಿಣ ನಿಯಮ, ಮಾರ್ಗಸೂಚಿ ಅಗತ್ಯ ಎನ್ನುವ ಕುರಿತು ಚರ್ಚೆ ನಡೆಸಲಾಗುತ್ತದೆ.

ಈ ಸುದ್ದಿಯನ್ನೂ ಓದಿ:ಬೆಂಗಳೂರಿನಲ್ಲಿ 'ನಿರ್ಭಯಾ' ರೀತಿಯ ಲೈಂಗಿಕ ದೌರ್ಜನ್ಯ ಕೇಸ್‌: ಪರಾರಿಗೆ ಯತ್ನಿಸಿದ ಆರೋಪಿಗಳಿಗೆ ಗುಂಡು

ಜಿಲ್ಲೆಗಳಲ್ಲಿ ಲೋಕಲ್ ಕಂಟೈನ್​ಮೆಂಟ್ ಝೋನ್ ಸ್ಥಾಪಿಸಬೇಕು ಎಂದೂ ಕೇಂದ್ರ ಸೂಚನೆ ನೀಡಿರುವ ಕುರಿತು ಚರ್ಚೆ ನಡೆಸಲಾಗುತ್ತದೆ. ಲಾಕ್​ಡೌನ್ ನಂತರ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದರೂ ಸಕ್ರಿಯ ಕೇಸ್ ಕಡಿಮೆಯಾಗದ ಕಾರಣ ಮಾರ್ಗಸೂಚಿ ಮುಂದುವರೆಸಬೇಕು ಎನ್ನುವ ಸೂಚನೆ ಬಂದಿರುವ ಕುರಿತು ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಇದರ ಜೊತೆ ಬೆಡ್, ಆಕ್ಸಿಜನ್ ಸಮಸ್ಯೆ, ಔಷಧಿ ಪೂರೈಕೆ, ಐಸಿಯು, ವೆಂಟಿಲೇಟರ್ ಬೇಡಿಕೆ, ಬಳಕೆ, ಲಾಕ್​ಡೌನ್ ನಂತರದ ಸ್ಥಿತಿಗತಿ ಕುರಿತು ಸಭೆಯಲ್ಲಿ ಸಿಎಂ ಸಮಗ್ರವಾದ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ.

ABOUT THE AUTHOR

...view details