ಬೆಂಗಳೂರು:ಪವಿತ್ರ ಸಿದ್ಧಗಂಗಾ ಮಠವನ್ನು ರಾಜಕೀಯಕ್ಕೆ ಎಳೆದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕ್ಷುಲ್ಲಕ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ.
ರಾಜಕೀಯಕ್ಕೆ ಸಿದ್ಧಗಂಗಾ ಮಠವನ್ನು ಎಳೆದಿದ್ದು ಸಿದ್ದರಾಮಯ್ಯ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ: ಸಿಎಂ ಕಿಡಿ - ಸಿದ್ದರಾಮಯ್ಯ ಲೆಟೆಸ್ಟ್ ನ್ಯೂಸ್
ಸಿದ್ದರಾಮಯ್ಯ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ ದೇಶದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದಾಗ ಅಭಿವೃದ್ಧಿ ವಿಚಾರಗಳ ಕುರಿತು ಗಮನ ಸೆಳೆಯುವ ಬದಲು ಪ್ರತಿಪಕ್ಷದವರು ಹುರುಳಿಲ್ಲದ ಆರೋಪಗಳ ಮೂಲಕ ವೃಥಾ ಟೀಕೆಗಳನ್ನು ಮಾಡುತ್ತಿರುವುದು ಅವರ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಟ್ವೀಟ್ ಮಾಡಿದ್ದಾರೆ.
CM Yeddyurappa
ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿರುವ ಸಿಎಂ ಬಿಎಸ್ವೈ ಅವರು, ಜನರಿಗೆ ರಾಷ್ಟ್ರದ ಆಗು ಹೋಗುಗಳ ಬಗ್ಗೆ ತಿಳಿಸುವುದು ಓರ್ವ ಪ್ರಧಾನಿಯ ಕರ್ತವ್ಯ. ದೇಶದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದಾಗ ಅಭಿವೃದ್ಧಿ ವಿಚಾರಗಳ ಕುರಿತು ಗಮನ ಸೆಳೆಯುವ ಬದಲು ಪ್ರತಿಪಕ್ಷದವರು ಹುರುಳಿಲ್ಲದ ಆರೋಪಗಳ ಮೂಲಕ ವೃಥಾ ಟೀಕೆಗಳನ್ನು ಮಾಡುತ್ತಿರುವುದು ಅವರ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.