ಬೆಂಗಳೂರು: ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಸುರೇಶ್ ಅಂಗಡಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರಲಿದ್ದಾರೆ.
ನಾಳೆ ಬೆಳಗಾವಿಗೆ ಸಿಎಂ: ಮಂಗಳಾ ಸುರೇಶ್ ಅಂಗಡಿ ನಾಮಪತ್ರ ಸಲ್ಲಿಕೆ ವೇಳೆ ಬಿಎಸ್ವೈ ಸಾಥ್ - ಬೆಳಗಾವಿ ಲೋಕಸಭಾ ಉಪಚುನಾವಣೆ
ನಾಳೆ ಸಿಎಂ ಯಡಿಯೂರಪ್ಪ ಬೆಳಗಾವಿಗೆ ತೆರಳಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 7.25 ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
![ನಾಳೆ ಬೆಳಗಾವಿಗೆ ಸಿಎಂ: ಮಂಗಳಾ ಸುರೇಶ್ ಅಂಗಡಿ ನಾಮಪತ್ರ ಸಲ್ಲಿಕೆ ವೇಳೆ ಬಿಎಸ್ವೈ ಸಾಥ್ Tomorrow CM Yeddyurappa to Belgaum](https://etvbharatimages.akamaized.net/etvbharat/prod-images/768-512-11202386-thumbnail-3x2-vis.jpg)
ನಾಳೆ ಬೆಳಗಾವಿಗೆ ಸಿಎಂ
ಬೆಳಗ್ಗೆ 11.35ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಯಡಿಯೂರಪ್ಪ, ಮಧ್ಯಾಹ್ನ 1.15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ನಂತರ ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿರುವ ಸಮಾರಂಭದಲ್ಲಿ ಭಾಗವಹಿಸುತ್ತಾರೆ.
ಇದನ್ನೂ ಓದಿ:1,500 ಖಾಸಗಿ ಬಸ್ ಕಾರ್ಯಾಚರಣೆಗೆ ಬಿಎಂಟಿಸಿ ಉತ್ಸುಕ: ಇದು ಖಾಸಗೀಕರಣದ ಮೊದಲ ಹೆಜ್ಜೆನಾ?
Last Updated : Mar 29, 2021, 4:57 PM IST