ಬೆಂಗಳೂರು:ಆರೋಗ್ಯ ಇಲಾಖೆಗೆ ಮಾಹಿತಿ ನೀಡದೆ, ತಜ್ಞರ ಸಮಿತಿ ಅಭಿಪ್ರಾಯ ಪಡೆಯದೇ ಏಕಪಕ್ಷೀಯವಾಗಿ ಎಸ್ಎಸ್ಎಲ್ಸಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ. ಆರೋಗ್ಯ ಸಚಿವ ಸುಧಾಕರ್ ಮತ್ತು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಡುವಿನ ಪ್ರತಿಷ್ಠೆಗೆ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲಾಗುತ್ತಿದೆ ಎನ್ನುವ ಮಾತುಗಳು ಹರಿದಾಡುತ್ತಿದ್ದಂತೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಸ್ಪಷ್ಟೀಕರಣದ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕುರಿತು ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಸಿಎಂ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಜು.19, 22 ರಂದು SSLC ಪರೀಕ್ಷೆ.. ಯಾವ ಪರೀಕ್ಷೆ ಯಾವಾಗ: ಇಲ್ಲಿದೆ ಸಂಪೂರ್ಣ ವಿವರ