ಕರ್ನಾಟಕ

karnataka

ETV Bharat / state

ಸಿಎಂ ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ - ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ

ಸಿಎಂ ಯಡಿಯೂರಪ್ಪ 79ನೇ ವಸಂತಕ್ಕೆ ಕಾಲಿಟ್ಟಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

house
ಸಿಎಂ ಯಡಿಯೂರಪ್ಪ

By

Published : Feb 27, 2021, 12:32 PM IST

ಬೆಂಗಳೂರು: ಸಿಎಂ ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬಿಜೆಪಿ ನಾಯಕರು, ಸಚಿವರು ಕಾವೇರಿ ನಿವಾಸಕ್ಕೆ ಆಗಮಿಸಿ ಹೂ ಗುಚ್ಛ ನೀಡಿ ಶುಭ ಹಾರೈಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ‌ನಾರಾಯಣ, ಉಮೇಶ್ ಕತ್ತಿ, ಎಸ್.ಆರ್.ವಿಶ್ವನಾಥ್ ಸೇರಿ ಅನೇಕ ಗಣ್ಯರು ಸಿಎಂಗೆ ಶುಭ ಕೋರಿದರು.

ಡಿಜಿ-ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್ ಸೇರಿ ಹಿರಿಯ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳು ಸಹ ಯಡಿಯೂರಪ್ಪಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು.

ಕುಟುಂಬಸ್ಥರಿಂದ ಹಾರೈಕೆ
ಪುತ್ರರಾದ ವಿಜಯೇಂದ್ರ, ರಾಘವೇಂದ್ರ, ಪುತ್ರಿಯರಾದ ಅರುಣಾ ದೇವಿ, ಉಮಾದೇವಿ ಸೇರಿ ಕುಟುಂಬಸ್ಥರು ಸಿಎಂ ಯಡಿಯೂರಪ್ಪಗೆ ಶುಭಾಶಯ ಕೋರಿದರು. ಪುತ್ರಿಯರು ಬಿಎಸ್​ವೈಗೆ ಆರತಿ ಬೆಳಗಿದರು.

ಸಿಎಂರಿಂದ ಗೋ ಪೂಜೆ
ಇದೇ ವೇಳೆ ಸಿಎಂ ಕಾವೇರಿ ನಿವಾಸದಲ್ಲಿರುವ ಗೋವಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಬೈರತಿ ಬಸವರಾಜ್, ಎಸ್.ಆರ್.ವಿಶ್ವನಾಥ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

ABOUT THE AUTHOR

...view details