ಬೆಂಗಳೂರು: ಒಂಬತ್ತು ತಿಂಗಳ ಗರ್ಭಿಣಿ ಆಗಿದ್ದರೂ ಪ್ರತಿನಿತ್ಯ ಕರ್ತವ್ಯಕ್ಕೆ ಹಾಜರಾಗುತ್ತಾ ವೈದ್ಯಕೀಯ ಸೇವೆಯಲ್ಲಿ ತೊಡಗಿರುವ ತವರು ಜಿಲ್ಲೆಯ ನರ್ಸ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಜೊತೆಗೆ ಇಂದಿನಿಂದಲೇ ವಿಶ್ರಾಂತಿ ಪಡೆಯಲು ಸೂಚನೆ ನೀಡಿದ್ದಾರೆ.
9 ತಿಂಗಳ ತುಂಬು ಗರ್ಭಿಣಿಯಾಗಿದ್ದರೂ ರಜೆ ತೆಗೆದುಕೊಳ್ಳದೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ರೂಪ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಮಾತನಾಡಿಸಿದರು. ನಿಮ್ಮ ಶ್ರಮ ನೋಡಿ ಆಶ್ಚರ್ಯ ಆಗುತ್ತಿದೆ. ನಮ್ಮ ಜಿಲ್ಲೆಯವರಾಗಿ ಇಷ್ಟೊಂದು ಶ್ರಮ ಹಾಕುತ್ತಿದ್ದೀರಿ ಇಂದಿನಿಂದಲೇ ವಿಶ್ರಾಂತಿ ಪಡೆಯಿರಿ ಎಂದು ಸೂಚನೆ ನೀಡಿದರು.